ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತಮಾಲೆ ಅಭಿಯಾನ ನಡೆಯಲಿದ್ದು, ರಾಜ್ಯದ ವಿವಿಧೆಡೆಯಿಂದ ಭಕ್ತರು ದತ್ತಪೀಠಕ್ಕೆ ಆಗಮಿಸುತ್ತಿದ್ದು, ನಗರದಲ್ಲಿ ಶೋಭಾ ಯಾತ್ರೆ, ಧಾರ್ಮಿಕ ಸಭೆ ಹಮ್ಮಿಕೊಳ್ಳಲಾಗಿದೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದ್ದು ಜಿಲ್ಲೆಯ ಗಡಿ ಭಾಗದಲ್ಲಿ ಪೊಲೀಸ್ ತಪಾಸಣಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಭಾಗದ ಪ್ರವಾಸಿತಾಣಗಳಿಗೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ ದತ್ತಮಾಲಾಧಾರಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಭದ್ರತೆ ಕುರಿತು ಚಿಕ್ಕಮಗಳೂರಿನಲ್ಲಿಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಮಾಹಿತಿ ನೀಡಿದ್ದು ಸುಮಾರು 1700 ಸಿಬ್ಬಂದಿಗಳನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಒರ್ವ ಎಸ್.ಪಿ, 6 ಜನ ಡಿ.ವೈ ಎಸ್.ಪಿ 1500 ಪೊಲೀಸ್ ಕಾನ್ಸ್ ಟೇಬಲ್, 11 ಡಿ.ಎ.ಆರ್ ತುಕ್ಕಡಿ ಸೇರಿ ಒಟ್ಟು 1700 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಹಾಗೆ ದತ್ತಪೀಠದಲ್ಲಿ ಸಿ.ಸಿ ಟಿ.ವಿಗಳನ್ನು ಅಳವಡಿಸಲಾಗಿದ್ದು ಡ್ರೋಣ್ ಚಿತ್ರೀಕರಣ, ವಾಹನಗಳ ತಪಾಸಣೆ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…