Advertisement
ಸುದ್ದಿಗಳು

ಚಿಕ್ಕಮಗಳೂರಿನಲ್ಲಿ ದತ್ತಮಾಲೆ ಅಭಿಯಾನ | ಬಿಗಿ ಭದ್ರತೆ – 1700 ಪೊಲೀಸ್ ಸಿಬ್ಬಂದಿ ನಿಯೋಜನೆ

Share

 ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತಮಾಲೆ ಅಭಿಯಾನ ನಡೆಯಲಿದ್ದು, ರಾಜ್ಯದ ವಿವಿಧೆಡೆಯಿಂದ ಭಕ್ತರು ದತ್ತಪೀಠಕ್ಕೆ ಆಗಮಿಸುತ್ತಿದ್ದು,  ನಗರದಲ್ಲಿ ಶೋಭಾ ಯಾತ್ರೆ, ಧಾರ್ಮಿಕ ಸಭೆ ಹಮ್ಮಿಕೊಳ್ಳಲಾಗಿದೆ. ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದ್ದು ಜಿಲ್ಲೆಯ ಗಡಿ ಭಾಗದಲ್ಲಿ ಪೊಲೀಸ್ ತಪಾಸಣಾ ಕೇಂದ್ರಗಳನ್ನು ಆರಂಭಿಸಲಾಗಿದೆ.  ಈ ಭಾಗದ ಪ್ರವಾಸಿತಾಣಗಳಿಗೆ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ ದತ್ತಮಾಲಾಧಾರಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಭದ್ರತೆ ಕುರಿತು  ಚಿಕ್ಕಮಗಳೂರಿನಲ್ಲಿಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಮಾಹಿತಿ ನೀಡಿದ್ದು ಸುಮಾರು 1700 ಸಿಬ್ಬಂದಿಗಳನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಒರ್ವ ಎಸ್.ಪಿ, 6 ಜನ ಡಿ.ವೈ ಎಸ್.ಪಿ 1500 ಪೊಲೀಸ್ ಕಾನ್ಸ್ ಟೇಬಲ್, 11 ಡಿ.ಎ.ಆರ್ ತುಕ್ಕಡಿ ಸೇರಿ ಒಟ್ಟು 1700 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಹಾಗೆ ದತ್ತಪೀಠದಲ್ಲಿ ಸಿ.ಸಿ ಟಿ.ವಿಗಳನ್ನು ಅಳವಡಿಸಲಾಗಿದ್ದು ಡ್ರೋಣ್ ಚಿತ್ರೀಕರಣ, ವಾಹನಗಳ ತಪಾಸಣೆ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

10 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

16 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

16 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

16 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

16 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

1 day ago