ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಲವೆಡೆ ತೀವ್ರ ಅನಾಹುತಕ್ಕೆ ಕಾರಣವಾಗಿದೆ. ಮಳೆಯ ಅಬ್ಬರದಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿರುವ ಘಟನೆಗಳು ವರದಿಯಾಗಿವೆ. ಮಲ್ಲೇನಹಳ್ಳಿ, ಅರಿಶಿಣಗುಪ್ಪೆ, ಕೈಮರ, ಹುಕ್ಕುಂದ ಹಾಗೂ ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ.
ಮೂಡಿಗೆರೆ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಗಂಗನಮಕ್ಕಿ, ಬಿಳುಗುಳ, ಹಳ್ಳದಂಗಡಿ, ಹ್ಯಾಂಡ್ ಪೋಸ್ಟ್ ಹಾಗೂ ಕೊಟ್ಟಿಗೆಹಾರ ಪ್ರದೇಶಗಳಲ್ಲಿ ಮಳೆಯ ಆರ್ಭಟಕ್ಕೆ ಅನೇಕ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.
ಇದರಿಂದಾಗಿ ಹಲವಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನರು ಕತ್ತಲಿನಲ್ಲಿ ದಿನ ಕಳೆಯುವ ಪರಿಸ್ಥಿತಿ ಉಂಟಾಗಿದೆ. ರಸ್ತೆ ಸಂಚಾರಕ್ಕೂ ಕೆಲವೆಡೆ ಅಡಚಣೆ ಉಂಟಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇನ್ನು 4 ದಿನ ಎಚ್ಚರಿಕೆ : ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.
ಮುನ್ನೆಚ್ಚರಿಕಾ ಕ್ರಮಗಳ ಕಡೆಗೆ ಇರಲಿ ಗಮನ :
Heavy rainfall in Chikkamagaluru district has caused widespread disruption, with trees and electric poles uprooted in several areas. Power outages have affected many villages. The India Meteorological Department has forecast continued rain with strong winds for the next four days, urging residents to stay cautious.
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…