Advertisement
MIRROR FOCUS

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

Share

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಲವೆಡೆ ತೀವ್ರ ಅನಾಹುತಕ್ಕೆ ಕಾರಣವಾಗಿದೆ. ಮಳೆಯ ಅಬ್ಬರದಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.  ಜಿಲ್ಲೆಯ ವಿವಿಧ ಭಾಗಗಳಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿರುವ ಘಟನೆಗಳು ವರದಿಯಾಗಿವೆ. ಮಲ್ಲೇನಹಳ್ಳಿ, ಅರಿಶಿಣಗುಪ್ಪೆ, ಕೈಮರ, ಹುಕ್ಕುಂದ ಹಾಗೂ ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ.

ಮೂಡಿಗೆರೆ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಗಂಗನಮಕ್ಕಿ, ಬಿಳುಗುಳ, ಹಳ್ಳದಂಗಡಿ, ಹ್ಯಾಂಡ್ ಪೋಸ್ಟ್ ಹಾಗೂ ಕೊಟ್ಟಿಗೆಹಾರ ಪ್ರದೇಶಗಳಲ್ಲಿ ಮಳೆಯ ಆರ್ಭಟಕ್ಕೆ ಅನೇಕ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.

ಇದರಿಂದಾಗಿ ಹಲವಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನರು ಕತ್ತಲಿನಲ್ಲಿ ದಿನ ಕಳೆಯುವ ಪರಿಸ್ಥಿತಿ ಉಂಟಾಗಿದೆ. ರಸ್ತೆ ಸಂಚಾರಕ್ಕೂ ಕೆಲವೆಡೆ ಅಡಚಣೆ ಉಂಟಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇನ್ನು 4 ದಿನ ಎಚ್ಚರಿಕೆ : ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.  ಸಾರ್ವಜನಿಕರು ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಲಾಗಿದೆ.

ಮುನ್ನೆಚ್ಚರಿಕಾ ಕ್ರಮಗಳ ಕಡೆಗೆ ಇರಲಿ ಗಮನ :

  • ಹಳೆಯ ಮರಗಳ ಹತ್ತಿರ ನಿಲ್ಲಬೇಡಿ
  • ವಿದ್ಯುತ್ ಕಂಬಗಳ ಬಳಿ ಹೋಗಬೇಡಿ
  • ಅಗತ್ಯವಿದ್ದರೆ ಮಾತ್ರ ಪ್ರಯಾಣ ಮಾಡಿ
  • ಮಳೆಯ ಸಮಯದಲ್ಲಿ ಸುರಕ್ಷಿತ ಸ್ಥಳದಲ್ಲಿ ಇರಿ

Heavy rainfall in Chikkamagaluru district has caused widespread disruption, with trees and electric poles uprooted in several areas. Power outages have affected many villages. The India Meteorological Department has forecast continued rain with strong winds for the next four days, urging residents to stay cautious.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

9 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

18 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago