Advertisement
MIRROR FOCUS

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ

Share

ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ ಸಂಸ್ಥೆ ವತಿಯಿಂದ ಫೆಬ್ರವರಿ 17ರಂದು ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ “ಕಾಳುಮೆಣಸು ಮತ್ತಿತರೆ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ರಫ್ತು” ಕುರಿತು ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ತರಬೇತಿ ಕಾರ್ಯಕ್ರಮವು ಸಂಬಾರು ಬೆಳೆಗಾರರು, ರೈತ ಉತ್ಪಾದಕ ಸಂಸ್ಥೆಗಳು (FPOs) ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಕ್ಷೇತ್ರದಲ್ಲಿ ತೊಡಗಿರುವ ಉದ್ಯಮಿಗಳಿಗೆ ವಿಶೇಷವಾಗಿ ಉಪಯುಕ್ತವಾಗಲಿದೆ.

ತರಬೇತಿಯ ವೇಳೆ ಕಾಳುಮೆಣಸು ಸೇರಿದಂತೆ ವಿವಿಧ ಸಂಬಾರು ಉತ್ಪನ್ನಗಳ ಸಂಸ್ಕರಣಾ ವಿಧಾನಗಳು, ಮೌಲ್ಯವರ್ಧನೆ ತಂತ್ರಜ್ಞಾನಗಳು, ರಫ್ತು ಗುಣಮಟ್ಟದ ಮಾನದಂಡಗಳು ಹಾಗೂ ಜಾಗತಿಕ ಮಾರುಕಟ್ಟೆ ಅವಕಾಶಗಳ ಕುರಿತು ತಜ್ಞರಿಂದ ಮಾರ್ಗದರ್ಶನ ನೀಡಲಾಗುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇದರಿಂದ ರೈತರು ತಮ್ಮ ಉತ್ಪನ್ನಗಳಿಗೆ ಹೆಚ್ಚುವರಿ ಮೌಲ್ಯವನ್ನು ಸೇರಿಸಿ ಉತ್ತಮ ದರ ಪಡೆಯುವ ಜೊತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಗೆ ಪ್ರವೇಶಿಸುವ ಅವಕಾಶವನ್ನು ಹೆಚ್ಚಿಸಿಕೊಳ್ಳಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಬಾರು ಬೆಳೆಗಳಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ, ಇಂತಹ ತರಬೇತಿ ಕಾರ್ಯಕ್ರಮಗಳು ರೈತರ ಆದಾಯ ಹೆಚ್ಚಳಕ್ಕೆ ಹಾಗೂ ರಫ್ತು ಸಾಮರ್ಥ್ಯ ವೃದ್ಧಿಗೆ ಸಹಕಾರಿಯಾಗುವ ನಿರೀಕ್ಷೆಯಿದೆ.

A one-day training program on processing, value addition, and export of pepper and other spices will be held on February 17 at the Chikkamagaluru Zilla Panchayat hall, organized by Karnataka State Agricultural Produce Processing and Export Corporation. The program aims to help farmers, FPOs, and entrepreneurs learn export standards, value addition, and global market opportunities.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

14 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

2 days ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

3 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago