10 ಸಾವಿರ ಗೂಡುಗಳ ಅಪರೂಪದ ಪಕ್ಷಿಧಾಮ ಇದು

February 4, 2026
9:09 AM

ಬಾಗಲಕೋಟೆ ಜಿಲ್ಲೆಯ ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶವನ್ನು ಪರಿಸರ ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಬೀಳಗಿ ಶಾಸಕ ಜೆ.ಟಿ.ಪಾಟೀಲ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ದೋಣಿಯಲ್ಲಿ ತೆರಳಿ ದ್ವೀಪಗಳು ಹಾಗೂ ಸುತ್ತಮುತ್ತಲಿನ ಹಿನ್ನೀರಿನ ಪ್ರದೇಶವನ್ನು ವೀಕ್ಷಿಸಿ, ಪರಿಸರ ಪ್ರವಾಸೋದ್ಯಮದ ಅವಕಾಶಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಜೆ.ಟಿ.ಪಾಟೀಲ, ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಪ್ರದೇಶಕ್ಕೆ ಪ್ರತಿವರ್ಷ 36ಕ್ಕೂ ಹೆಚ್ಚು ಪ್ರಭೇದದ ವಲಸೆ ಪಕ್ಷಿಗಳು ಆಗಮಿಸುತ್ತಿವೆ ಎಂದು ತಿಳಿಸಿದ್ದಾರೆ.  ಚಿಕ್ಕಸಂಗಮ ಪ್ರದೇಶವು ಜಗತ್ತಿನಲ್ಲಿಯೇ ಅತಿ ದೊಡ್ಡ ರಿವರ್ ಟರ್ನ್ ಪಕ್ಷಿಗಳ ವಂಶಾಭಿವೃದ್ಧಿ ಪ್ರದೇಶಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಒಂದೇ ಪ್ರದೇಶದಲ್ಲಿ 10 ಸಾವಿರಕ್ಕೂ ಅಧಿಕ ಗೂಡುಗಳು ಕಂಡುಬರುವುದು ವಿಶ್ವದಲ್ಲೇ ಅಪರೂಪದ ದಾಖಲೆ ಎಂದು ಅವರು ಹೇಳಿದ್ದಾರೆ.

ಚಿಕ್ಕಸಂಗಮ ಮೀಸಲು ಪ್ರದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಪರಿಸರ ಸಂರಕ್ಷಣೆಯ ಜೊತೆಗೆ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror