ಬಾಗಲಕೋಟೆ ಜಿಲ್ಲೆಯ ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶವನ್ನು ಪರಿಸರ ಪ್ರವಾಸೋದ್ಯಮದ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಬೀಳಗಿ ಶಾಸಕ ಜೆ.ಟಿ.ಪಾಟೀಲ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ದೋಣಿಯಲ್ಲಿ ತೆರಳಿ ದ್ವೀಪಗಳು ಹಾಗೂ ಸುತ್ತಮುತ್ತಲಿನ ಹಿನ್ನೀರಿನ ಪ್ರದೇಶವನ್ನು ವೀಕ್ಷಿಸಿ, ಪರಿಸರ ಪ್ರವಾಸೋದ್ಯಮದ ಅವಕಾಶಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಜೆ.ಟಿ.ಪಾಟೀಲ, ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಪ್ರದೇಶಕ್ಕೆ ಪ್ರತಿವರ್ಷ 36ಕ್ಕೂ ಹೆಚ್ಚು ಪ್ರಭೇದದ ವಲಸೆ ಪಕ್ಷಿಗಳು ಆಗಮಿಸುತ್ತಿವೆ ಎಂದು ತಿಳಿಸಿದ್ದಾರೆ. ಚಿಕ್ಕಸಂಗಮ ಪ್ರದೇಶವು ಜಗತ್ತಿನಲ್ಲಿಯೇ ಅತಿ ದೊಡ್ಡ ರಿವರ್ ಟರ್ನ್ ಪಕ್ಷಿಗಳ ವಂಶಾಭಿವೃದ್ಧಿ ಪ್ರದೇಶಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಒಂದೇ ಪ್ರದೇಶದಲ್ಲಿ 10 ಸಾವಿರಕ್ಕೂ ಅಧಿಕ ಗೂಡುಗಳು ಕಂಡುಬರುವುದು ವಿಶ್ವದಲ್ಲೇ ಅಪರೂಪದ ದಾಖಲೆ ಎಂದು ಅವರು ಹೇಳಿದ್ದಾರೆ.
ಚಿಕ್ಕಸಂಗಮ ಮೀಸಲು ಪ್ರದೇಶವನ್ನು ಅಭಿವೃದ್ಧಿಪಡಿಸುವ ಮೂಲಕ ಪರಿಸರ ಸಂರಕ್ಷಣೆಯ ಜೊತೆಗೆ ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…