ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಹಾಗು ಕಳಸ ತಾಲೂಕುಗಳಲ್ಲಿ ಉಂಟಾದ ಪ್ರತ್ಯೇಕ ಕಾಡ್ಗಿಚ್ಚು ಪ್ರಕರಣಗಳಲ್ಲಿ 15 ಎಕರೆ ಕಾಫಿ ತೋಟ ಮತ್ತು 25 ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.………ಮುಂದೆ ಓದಿ……..
ಬಾಳೂರು ಮೀಸಲು ಅರಣ್ಯ ಪ್ರದೇಶದ ದೇವರಮನೆ ಗುಡ್ಡದಲ್ಲಿ ಕಾಡ್ಗಿಚ್ಚು ಉಂಟಾಗಿ 10 ಎಕರೆಕೆಗೆ ಹೆಚ್ಚು ಅರಣ್ಯ ಪ್ರದೇಶ ಸುಟ್ಟು ನಾಶವಾಗಿದೆ. ಕುಂದೂರು ಸಮೀಪದ ಕಣೇಗದ್ದೆ ಗ್ರಾಮದಲ್ಲಿ ಕಾಫಿತೋಟಕ್ಕೆ ಬೆಂಕಿ ಬಿದ್ದು ಸುಮಾರು 15 ಎಕರೆ ಕಾಫಿ ತೋಟ ನಾಶವಾಗಿದೆ. ಮೂಡಿಗೆರೆ ಅಗ್ನಿ ಶಾಮಕದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಕಳಸ ತಾಲೂಕು ಬಲಿಗೆ ಅರಣ್ಯದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ. ಅರಣ್ಯಾಧಿಕಾರಿಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಮಂಗಳವಾರ ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕ್ರೆ ಅರಣ್ಯ ಬೆಂಕಿಗಾಹುತಿಯಾಗಿತ್ತು.
ಕಳೆದ ಕೆಲವು ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಅದರಲ್ಲೂ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡ್ಗಿಚ್ಚಿನಿಂದ ಚಂದ್ರದ್ರೋಣ ಪರ್ವತಗಳ ಸಾಲಿನ ರಕ್ಷಣೆ ಮಾಡಲು ಅರಣ್ಯ ಇಲಾಖೆ ಡ್ರೋನ್‌ಗಳ ಮೊರೆ ಹೋಗಿದ್ದಾರೆ. ಬೆಂಕಿಯಿಂದ ಕಾಡನ್ನ ರಕ್ಷಿಸಲು ಡ್ರೋನ್ ಕಣ್ಗಾವಲಿಗೆ ಇಲಾಖೆ ಮುಂದಾಗಿದೆ. ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದರೆ ನಂದಿಸುವುದು ಕಷ್ಟವಾಗಿರುವುದರಿಂದ ಅಗ್ನಿಶಾಮಕ ವಾಹನ ಹೋಗುವುದು ಕಷ್ಟವಾಗಿದೆ.
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…