ಕೃಷಿ ವಿಶ್ವವಿದ್ಯಾಲಯದಿಂದ ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ‘’ಕೃಷಿ ಪರಿಸರದಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಒಂದು ದಿನ’’ ಕಾರ್ಯಕ್ರಮ ನಡೆಯಿತು. ವಿಶೇಷಷೇತನ ಮಕ್ಕಳು ಔಷಧಿ ಗಿಡಗಳು ಹಾಗೂ ಕೃಷಿ ಚಟುವಟಿಕೆಗಳನ್ನು ಗಮನಿಸಿದರು.
ಮಕ್ಕಳು ಸಂಗೀತ, ರಸಪ್ರಶ್ನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ತಮ್ಮ ಕೌಶಲ್ಯ ಪ್ರದರ್ಶಿಸಿದರು. ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿನ ನೂರಕ್ಕೂ ಹೆಚ್ಚು ವಿಶೇಷ ಔಷಧೀಯ ಗುಣಗಳುಳ್ಳ ಸಸಿಗಳ ಬಗ್ಗೆ ಮಾಹಿತಿ ನೀಡಿದ ಸಿಬ್ಬಂದಿ, ಅವುಗಳ ಸದುಪಯೋಗದ ಕುರಿತು ಪೋಷಕರಿಗೆ ಮಾಹಿತಿ ನೀಡಿದರು.
ವಿಶೇಷ ಚೇತನರು ಸಾಮಾನ್ಯರಂತಿರಬೇಕು ಎನ್ನುವ ಆಶಯದೊಂದಿಗೆ ಕಾರ್ಯಕ್ರಮ ರೂಪಿಸಲಾಗಿದೆ. ವಿಶೇಷ ಮನಸ್ಸುಗಳಿಗೆ ಪ್ರತಿಯೊಬ್ಬರೂ ಸ್ಪಂಧಿಸುವ ಮನೋಭಾವ ಬೆಳೆಸಿಕೊಳ್ಳಬೇಕಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ. ಸುರೇಶ್ ಹೇಳಿದರು.
ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ಡೀನ್ ಡಾ.ಮೋಹನ್ ನಾಯ್ಕ, ಪ್ರಾಧ್ಯಾಪಕರಾದ ಡಾ ಕೆ.ಪಿ.ರಘುಪ್ರಸಾದ್, ಡಾ.ಸಿದ್ದಯ್ಯ, ಡಾ.ಮಹದೇವ ಮೂರ್ತಿ, ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…