ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಮತ್ತು ಪ್ಲಾಸ್ಟಿಕ್ ಬಳಕೆ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟಿದ್ದಾರೆ.
ದಾವಣಗೆರೆಯಲ್ಲಿ ಜವಾಹರ್ ಬಾಲ್ ಮಂಚ್ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಮಕ್ಕಳೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಳೆನೀರು ಸಂಗ್ರಹ, ಪರಿಸರ ಸ್ವಚ್ಛತೆ ಮತ್ತು ಪ್ಲಾಸ್ಟಿಕ್ ಬಳಕೆಯನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಮಕ್ಕಳಿಗೆ ಹೆಚ್ಚು ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ. ಮಕ್ಕಳೋತ್ಸವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 200 ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದರು. ಇಲ್ಲಿ ವಿಜೇತರಾದ ಮಕ್ಕಳು ಜೈಪುರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಮಕ್ಕಳೋತ್ಸವದಲ್ಲಿ ಭಾಗವಹಿಸಲಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel