ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಅಕ್ಟೋಬರ್ ಮಾಹೆಯಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಬೆಳೆಹಾನಿ ಆದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಉಂಟಾದ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷಾ ತಂಡವು ಸ್ಥಳ ಪರಿಶೀಲನೆ ನಡೆಸಿ, ಬೆಳೆ ಹಾನಿ ಕ್ಷೇತ್ರಗಳ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಒಟ್ಟು 914.45 ಹೆಕ್ಟೇರ್ ಕೃಷಿ ಬೆಳೆ ಹಾಗೂ 241.80 ತೋಟಗಾರಿಕೆ ಬೆಳೆ ಸೇರಿ ಒಟ್ಟು 1156 ಹೆಕ್ಟೇರ್ ಕ್ಷೇತ್ರದಲ್ಲಿ ಬೆಳೆ ಹಾನಿಯಾಗಿದೆ. ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದಿದ್ದರೆ ಪಟ್ಟಿಯನ್ನು ಅಂತಿಮಗೊಳಿಸಿ ನಿಯಮಾನುಸಾರ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ಕೆಪಿಸಿಯಿಂದ ನೇರವಾಗಿ ವಿದ್ಯುತ್ ಒದಗಿಸಲು ನಿರ್ಮಿಸಲಾದ ವಿದ್ಯುತ್…
ಮೈಸೂರು ಮೃಗಾಲಯದ ಪ್ರವೇಶ ದರ ಶೇಕಡ 20ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಮೃಗಾಲಯ…
ಕೇಂದ್ರ ಬಂದರು , ಹಡಗು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ,…
ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ- NCDCಗೆ ಮುಂದಿನ ನಾಲ್ಕು ವರ್ಷಗಳಿಗಾಗಿ ಸಚಿವ ಸಂಪುಟ…
ರಾಜ್ಯದಲ್ಲಿ ಖಾದಿ ಚಟುವಟಿಕೆ ಇಲ್ಲದಿರುವ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು…
2025 ರ ಮುಂಗಾರು ಋತುವಿನ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ…