ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಐತಿಹಾಸಿಕ ವಾಣಿ ವಿಲಾಸ ಜಲಾಶಯ ತುಂಬಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿ , ಗಂಗಾ ಪೂಜೆ ನೆರವೇರಿಸಿದರು.
ಬಳಿಕ ಸಿದ್ದರಾಮಯ್ಯ, ನೀರಾವರಿಗೆ ರಾಜ್ಯ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, ಸಾವಿರದ 274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದ್ದು, ಯೋಜನೆ ಜಾರಿಯಾದರೆ ಈ ಭಾಗದ ಕಟ್ಟಕಡೆಯ ಜಮೀನಿಗೂ ನೀರಿನ ಸೌಲಭ್ಯ ದೊರೆಯಲಿದೆ ಎಂದು ಹೇಳಿದರು. 115 ವರ್ಷಗಳ ಇತಿಹಾಸ ಇರುವ ಹಾಗೂ ರಾಜ್ಯದಲ್ಲಿ ನಿರ್ಮಾಣವಾದ ಮೊದಲ ಜಲಾಶಯ ವಾಣಿವಿಲಾಸ ಸಾಗರ ಆಗಿದ್ದು, ಮೂರನೇ ಬಾರಿಗೆ ಕೋಡಿ ಬಿದ್ದಿದೆ. ಇದರಿಂದ 30 ಸಾವಿರ ಎಕರೆಗೆ ನೀರಿನ ಸೌಲಭ್ಯ ದೊರೆಯುತ್ತಿದೆ ಎಂದು ಹೇಳಿದರು.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಸೇರಿದಂತೆ ಜಿಲ್ಲೆಯ ಶಾಸಕರು, ಮುಖಂಡರು ಹಾಗೂ ಅಧಿಕಾರಿಘಲು ಉಪಸ್ಥಿತರಿದ್ದರು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…