Advertisement
ಸುದ್ದಿಗಳು

ಚಿತ್ರದುರ್ಗ | ತುಂಬಿದ ವಾಣಿ ವಿಲಾಸ ಜಲಾಶಯ | 30 ಸಾವಿರ ಎಕರೆಗೆ ನೀರಿನ ಸೌಲಭ್ಯ

Share

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ  ಐತಿಹಾಸಿಕ ವಾಣಿ ವಿಲಾಸ  ಜಲಾಶಯ ತುಂಬಿರುವ  ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಬಾಗಿನ ಅರ್ಪಿಸಿ , ಗಂಗಾ ಪೂಜೆ  ನೆರವೇರಿಸಿದರು.

ಬಳಿಕ ಸಿದ್ದರಾಮಯ್ಯ, ನೀರಾವರಿಗೆ ರಾಜ್ಯ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು,  ಸಾವಿರದ 274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು  ಸಿದ್ಧಪಡಿಸಲಾಗುತ್ತಿದ್ದು,  ಯೋಜನೆ  ಜಾರಿಯಾದರೆ ಈ ಭಾಗದ  ಕಟ್ಟಕಡೆಯ  ಜಮೀನಿಗೂ ನೀರಿನ ಸೌಲಭ್ಯ ದೊರೆಯಲಿದೆ ಎಂದು ಹೇಳಿದರು. 115 ವರ್ಷಗಳ ಇತಿಹಾಸ ಇರುವ  ಹಾಗೂ ರಾಜ್ಯದಲ್ಲಿ  ನಿರ್ಮಾಣವಾದ  ಮೊದಲ ಜಲಾಶಯ ವಾಣಿವಿಲಾಸ ಸಾಗರ ಆಗಿದ್ದು, ಮೂರನೇ ಬಾರಿಗೆ ಕೋಡಿ ಬಿದ್ದಿದೆ. ಇದರಿಂದ 30 ಸಾವಿರ ಎಕರೆಗೆ  ನೀರಿನ ಸೌಲಭ್ಯ ದೊರೆಯುತ್ತಿದೆ ಎಂದು ಹೇಳಿದರು.

ಈ ವೇಳೆ   ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್,  ಜಿಲ್ಲಾ ಉಸ್ತುವಾರಿ ಸಚಿವ  ಡಿ. ಸುಧಾಕರ್  ಸೇರಿದಂತೆ ಜಿಲ್ಲೆಯ ಶಾಸಕರು, ಮುಖಂಡರು ಹಾಗೂ ಅಧಿಕಾರಿಘಲು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

10 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago