ಚೊಕ್ಕಾಡಿಯ ಸತ್ಯಸಾಯಿ ವಿದ್ಯಾಕೇಂದ್ರದಲ್ಲಿ ವಿಶೇಷ ಉಪನ್ಯಾಸ | ಭಾರತದ ಯುವಸಮೂಹ ಜಾಗೃತವಾಗಿರಬೇಕಾದ್ದು ಅಗತ್ಯ | ಸುಬ್ರಹ್ಮಣ್ಯ ನಟ್ಟೋಜ |

March 1, 2022
8:22 PM

ಭಾರತವನ್ನು ಹಾಳುಗೆಡಹುವುದಕ್ಕೆ ಪಾಕಿಸ್ಥಾನದಿಂದ ನಿರಂತರ ಪ್ರಯತ್ನ ನಡೆಯುತ್ತಿದೆ. ಹಾಗಾಗಿಯೇ ಇಲ್ಲಿನ ಯುವಸಮೂಹವನ್ನು ಗುರಿಯಾಗಿರಿಸಿಕೊಂಡು ಗಾಂಜಾ, ಹೆರಾಯಿನ್‍ಗಳು ಭಾರತದ ಗಡಿಯಿಂದ ಒಳನುಸುಳುತ್ತಿವೆ. ಇಂತಹ ಸಂದರ್ಭದಲ್ಲಿ ನಮ್ಮನ್ನು ನಾವು ಕಾಪಾಡಿಕೊಳ್ಳುವ ಮತ್ತು ದೇಶವನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬ ವಿದ್ಯಾರ್ಥಿಯ ಮೇಲೂ ಇದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.

ಅವರು ಸುಳ್ಯ ಸಮೀಪದ ಚೊಕ್ಕಾಡಿಯ ಸತ್ಯಸಾಯಿ ವಿದ್ಯಾಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ‘ರಾಷ್ಟ್ರಜಾಗೃತಿಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಎಂಬ ವಿಷಯದ ಬಗ್ಗೆ ಮಾತನಾಡಿದರು. ಬ್ರದರ್ಸ್ ಅಂಡ್ ಸಿಸ್ಟರ್ಸ್ ಅನ್ನುವ ಪದ ವಿವೇಕಾನಂದರು ಚಿಕಾಗೋ ಸಮ್ಮೇಳನದಲ್ಲಿ ಬಳಸುವ ಮೊದಲೂ ಅಸ್ತಿತ್ವದಲ್ಲಿತ್ತು. ಆದರೆ ವಿವೇಕಾನಂದರು ಬಳಸಿದ ಧ್ವನಿ, ಬಳಸಿದ ಸಂದರ್ಭ ಹಾಗೂ ಭಾವನೆ ಎಲ್ಲರನ್ನೂ ಚಕಿತಗೊಳಿಸಿತು. ಇದು ಕೇವಲ ವಿವೇಕಾನಂದರದಷ್ಟೇ ಅಲ್ಲ, ಭಾರತದ ಹೆಚ್ಚುಗಾರಿಕೆ. ಇಂತಹ ಭಾವಪೂರ್ಣ, ಧ್ವನಿಯುಕ್ತ ಮಾತುಗಳ ಹಿಂದೆ ಈ ಮಣ್ಣಿನ ಸಂಸ್ಕಾರ ಅಡಗಿದೆ. ಹಾಗಾಗಿ ಭಾರತದ ಹಿರಿಮೆಯನ್ನು ಯುವಸಮೂಹ ಅರ್ಥ ಮಾಡಿಕೊಂಡು ಹೆಮ್ಮೆಯಿಂದ ಬಾಳಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ನೆಲ್ಲಿಕಟ್ಟೆ ಅಂಬಿಕಾ ಪದವಿಪಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಎಂ. ಉಪಸ್ಥಿತರಿದ್ದರು.

ಸತ್ಯಸಾಯಿ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಗುಣಶೇಖರ ಭಟ್‌ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?
July 29, 2026
2:00 PM
by: ಸಾಯಿಶೇಖರ್ ಕರಿಕಳ
ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror