ಭಾರತವನ್ನು ಹಾಳುಗೆಡಹುವುದಕ್ಕೆ ಪಾಕಿಸ್ಥಾನದಿಂದ ನಿರಂತರ ಪ್ರಯತ್ನ ನಡೆಯುತ್ತಿದೆ. ಹಾಗಾಗಿಯೇ ಇಲ್ಲಿನ ಯುವಸಮೂಹವನ್ನು ಗುರಿಯಾಗಿರಿಸಿಕೊಂಡು ಗಾಂಜಾ, ಹೆರಾಯಿನ್‍ಗಳು ಭಾರತದ ಗಡಿಯಿಂದ ಒಳನುಸುಳುತ್ತಿವೆ. ಇಂತಹ ಸಂದರ್ಭದಲ್ಲಿ ನಮ್ಮನ್ನು ನಾವು ಕಾಪಾಡಿಕೊಳ್ಳುವ ಮತ್ತು ದೇಶವನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬ ವಿದ್ಯಾರ್ಥಿಯ ಮೇಲೂ ಇದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ಅವರು ಸುಳ್ಯ ಸಮೀಪದ ಚೊಕ್ಕಾಡಿಯ ಸತ್ಯಸಾಯಿ ವಿದ್ಯಾಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ‘ರಾಷ್ಟ್ರಜಾಗೃತಿಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಎಂಬ ವಿಷಯದ ಬಗ್ಗೆ ಮಾತನಾಡಿದರು. ಬ್ರದರ್ಸ್ ಅಂಡ್ ಸಿಸ್ಟರ್ಸ್ ಅನ್ನುವ ಪದ ವಿವೇಕಾನಂದರು ಚಿಕಾಗೋ ಸಮ್ಮೇಳನದಲ್ಲಿ ಬಳಸುವ ಮೊದಲೂ ಅಸ್ತಿತ್ವದಲ್ಲಿತ್ತು. ಆದರೆ ವಿವೇಕಾನಂದರು ಬಳಸಿದ ಧ್ವನಿ, ಬಳಸಿದ ಸಂದರ್ಭ ಹಾಗೂ ಭಾವನೆ ಎಲ್ಲರನ್ನೂ ಚಕಿತಗೊಳಿಸಿತು. ಇದು ಕೇವಲ ವಿವೇಕಾನಂದರದಷ್ಟೇ ಅಲ್ಲ, ಭಾರತದ ಹೆಚ್ಚುಗಾರಿಕೆ. ಇಂತಹ ಭಾವಪೂರ್ಣ, ಧ್ವನಿಯುಕ್ತ ಮಾತುಗಳ ಹಿಂದೆ ಈ ಮಣ್ಣಿನ ಸಂಸ್ಕಾರ ಅಡಗಿದೆ. ಹಾಗಾಗಿ ಭಾರತದ ಹಿರಿಮೆಯನ್ನು ಯುವಸಮೂಹ ಅರ್ಥ ಮಾಡಿಕೊಂಡು ಹೆಮ್ಮೆಯಿಂದ ಬಾಳಬೇಕು ಎಂದು ಹೇಳಿದರು.ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ನೆಲ್ಲಿಕಟ್ಟೆ ಅಂಬಿಕಾ ಪದವಿಪಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಎಂ. ಉಪಸ್ಥಿತರಿದ್ದರು.
ಸತ್ಯಸಾಯಿ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಗುಣಶೇಖರ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…