ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜು.6ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುತ್ತಿದೆ. ರಾಯಚೂರು, ಯಾದಗಿರಿ, ಬೀದರ್, ಬಾಗಲಕೋಟೆ , ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲೂ ಮಳೆ ಅಬ್ಬರಿಸಿದೆ. ಹೀಗಾಗಿ ಭಾರಿ ಮಳೆ ಬೀಳುತ್ತಿರುವ ಜಿಲ್ಲೆಗಳಲ್ಲಿ ಶಾಲಾ ಹಾಗೂ ಕಾಲೇಜುಗಳಿಗೆ ಈಗ ರಜೆ ನೀಡಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel