Advertisement
ಮಾಹಿತಿ

ಕ್ರಿಸ್ಮಸ್ ಹಾಗೂ ಹೊಸ ವರ್ಷ ಸರಳ ಸಂಭ್ರಮಾಚರಣೆ – ಜಿಲ್ಲಾಧಿಕಾರಿ ಆದೇಶ

Share

ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ಸರಕಾರವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಕೋವಿಡ್-19 ಸೋಂಕಿನ ಎರಡನೇ ಅಲೆ ಹರಡುವಿಕೆಯನ್ನು ನಿಯಂತ್ರಿಸಲು ಇನ್ನೂ ಹೆಚ್ಚು ಕಟ್ಟುನಿಟ್ಟಾಗಿ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇರುವ ಹಿನ್ನೆಲೆ ಕ್ರಿಸ್ಮಸ್ ಹಾಗೂ 2021ರ ಹೊಸ ವರ್ಷ ಸಂಭ್ರಮಾಚರಣೆಯನ್ನು ಸರಳವಾಗಿ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಆಚರಿಸಬೇಕು. ಅದರಂತೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 26(1)(2)(3) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷನಾಗಿ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 4ರಲ್ಲಿ ಪ್ರದತ್ತವಾದ ಅಧಿಕಾರದಂತೆ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ಕ್ರೈಸ್ತ ಧರ್ಮದ ಚರ್ಚ್ ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಚರ್ಚಿನ ಮೇಲ್ವಿಚಾರಕರು/ಕಾರ್ಯಕ್ರಮ ಆಯೋಜಕರು ಕಟ್ಟುನಿಟ್ಟಾಗಿ ಕ್ರಮ ವಹಿಸಬೇಕು.

ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೋವಿಡ್-19 ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಹಾಗೂ ಆಲಿಂಗನವನ್ನು ನಿಷೇಧಿಸಲಾಗಿದೆ. ಡಿ.30 ರಿಂದ ಜ.2 ರವರೆಗೆ ಕ್ಲಬ್/ಪಬ್/ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಸ್ಥಳ/ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ ವಿಶೇಷ ಡಿಜೆ ಡ್ಯಾನ್ಸ್ ಕಾರ್ಯಕ್ರಮಗಳನ್ನು, ವಿಶೇಷ ಪಾರ್ಟಿ, ಇತ್ಯಾದಿಗಳನ್ನು ನಿಷೇಧಿಸಿದೆ. ಆದರೆ ಕ್ಲಬ್/ಪಬ್ ರೆಸ್ಟೋರೆಂಟ್ ಗಳ ದೈನಂದಿನ ವ್ಯವಹಾರ ನಡೆಸಲು ನಿರ್ಬಂಧವಿರುವುದಿಲ್ಲ.

ಹೊಸ ವರ್ಷಾಚರಣೆ ಸಂಬಂಧದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮುಖ್ಯ ಸ್ಥಳಗಳಲ್ಲಿ ಹಾಗೂ ಮುಖ್ಯ ರಸ್ತೆಗಳಲ್ಲಿ ಮತ್ತು ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಿದೆ. ಆದರೆ, ಈ ಸ್ಥಳಗಳಲ್ಲಿ ಪ್ರತಿನಿತ್ಯದ ಸಾಮಾನ್ಯ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ನಿರ್ಬಂಧವಿರುವುದಿಲ್ಲ. ಆಯಾ ರಸ್ತೆ ಸ್ಥಳಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ನಿರ್ಬಂಧಗಳನ್ನು ವಿಧಿಸಲಾಗುವುದು.

65 ವರ್ಷದ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಹೋಟೆಲ್ ಗಳು/ಮಾಲ್ ಗಳು/ ಪಬ್/ ರೆಸ್ಟೋರೆಂಟ್ ಗಳು ಹಾಗೂ ಅಂತಹ ಪ್ರದೇಶಗಳಲ್ಲಿ ಥರ್ಮಾಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಮಾಡಿಸಲು ಮಾಲಿಕರು ಕಡ್ಡಾಯವಾಗಿ ವ್ಯವಸ್ಥೆ ಮಾಡಿರಬೇಕು.

ಹೋಟೆಲ್‍ಗಳು/ ಮಾಲ್‍ಗಳು/ ಪಬ್‍ಗಳು/ ರೆಸ್ಟೋರೆಂಟ್‍ಗಳಲ್ಲಿ ಅದರ ಮಾಲೀಕರು ಕಡ್ಡಾಯವಾಗಿ ಸರ್ಕಾರದ ಆದೇಶದಂತೆ ಕೋವಿಡ್-19ರ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರದಿಂದ ಜನರು ಸೇರಲು ಜಾಗ್ರತೆ ವಹಿಸಬೇಕು. ಅಗತ್ಯವಿದ್ದಲ್ಲಿ ಜನರನ್ನು ಸರದಿಯಲ್ಲಿ ಪ್ರವೇಶಿಸಲು ಅಥವಾ ಆನ್ ಲೈನ್ ಮುಖಾಂತರ ಅಥವಾ ಟೋಕನ್ ಪದ್ದತಿಯಲ್ಲಿ ಸ್ಥಳ ಕಾಯ್ದಿರಿಸಲು ವ್ಯವಸ್ಥೆ ಕಲ್ಪಿಸಬೇಕು.

ಪ್ರಾಂಗಣಗಳಲ್ಲಿ ಉಪಹಾರ ಸ್ಥಳಗಳಲ್ಲಿ ವ್ಯವಸ್ಥಿತ ಕಟ್ಟಡ ಸಮುಚ್ಚಯಗಳಲ್ಲಿ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ವ್ಯವಸ್ಥೆ ಕಲ್ಪಿಸಬೇಕು. ಸಂಭ್ರಮಾಚರಣೆ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು.

ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ ಹಾಗೂ ಇತರ ಇಲಾಖೆ/ಪಾಲಿಕೆ/ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ/ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

18 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

19 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

20 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago