ಹೊಂಬಾಳೆ ಬ್ಯಾನರ್ ಅಡಿಯಲ್ಲಿ, ರಿಷಬ್ ಶೆಟ್ಟಿ ಮನೋಜ್ಞ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದ ಸಿನಿಮಾ ‘ಕಾಂತಾರ’. ತುಳುನಾಡಿನ ದೈವಾರಾಧನೆ ಮತ್ತು ಕಂಬಳದ ಪ್ರಸ್ತುತಿ ಈ ಚಿತ್ರದಲ್ಲಿದೆ. ಹಾಗೆ ಈ ಸಿನಿಮಾ ಕಂಡ ಪ್ರತಿಯೊಬ್ಬರೂ ಕೊಂಡಾಡಿದ್ದಾರೆ. ಎಲ್ಲಾ ವಿಭಾಗದಲ್ಲಿ ಸೂಪರ್ ರಿವ್ಯೂ ಸಿಕ್ಕಿದೆ. ಹೀಗಾಗಿ ಕಾಂತಾರ ಬಿಡುಗಡೆ ಆಗಿರೋ ಚಿತ್ರಮಂದಿರಗಳಲ್ಲಿ ಮೊದಲ ಶೋನಿಂದ ಹೌಸ್ ಫುಲ್ ಬೋರ್ಡ್ ಬಿದ್ದಿದೆ. ಈ ನಡುವೆಯೇ ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾಗಿದೆ ಎಂದು ತಿಳಿದುಬಂದಿದೆ.
ಈ ಸಿನಿಮಾದ ಕ್ಲೈಮ್ಯಾಕ್ಸ್ ನ 15 ರಿಂದ 20 ನಿಮಿಷ ಪ್ರೇಕ್ಷಕರನ್ನು ನಿಬ್ಬೆರಗಾಗಿಸುವಂತೆ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಸಿನಿಮಾ ನೋಡುತ್ತಿರುವಂತೆಯೇ ಜನರು ರೋಮಾಂಚನವಾಗುತ್ತದೆ. ಈ ಕಾರಣದಿಂದಲೇ ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ಮಹಿಳೆ ವರ್ತಿಸಿದ್ದಾರೆ. ಈ ಘಟನೆ ನಡೆದಿರುವುದು ಮಂಗಳೂರಿನ ಮಾಲ್ ಒಂದರಲ್ಲಿನ ಚಿತ್ರಮಂದಿರದಲ್ಲಿ. ಆದರೆ ಈ ಬಗ್ಗೆ ಅಧಿಕೃತವಾದ ಯಾವುದೇ ಮಾಹಿತಿಗಳನ್ನು ಚಿತ್ರತಂಡ ಪ್ರಕಟಿಸಿಲ್ಲ.
ಈ ಸೂಪರ್ ಚಿತ್ರದ ಪ್ರಯತ್ನದಿಂದ ಸಿನಿಮಾ ಎರಡು ದಿನದಲ್ಲಿ ಬರೋಬ್ಬರಿ 8 ರಿಂದ 9 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…