#SwachchBharat | ಸ್ವಚ್ಛ ಗ್ರಾಮ ಅಭಿಯಾನ | ಪೊರಕೆ ಹಿಡಿದು ಸ್ವಚ್ಛತೆಗೆ ಇಳಿದ ಟಾಸ್ಕ್‌ಫೋರ್ಸ್‌ |

August 17, 2023
4:36 PM
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಛತಾ ಟಾಸ್ಕ್‌ಫೋರ್ಸ್‌ ಮೂಲಕ ಸ್ವಚ್ಛತೆಯ ಅರಿವು ಮೂಡಿಸುವ ಕೆಲಸ ಕಳೆದ ಎರಡು ತಿಂಗಳಿನಿಂದ ನಡೆಸಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಗುತ್ತಿಗಾರು ಪೇಟೆಯ ಸ್ವಚ್ಛತಾ ಅಭಿಯಾನ ಮಂದುವರಿದಿದೆ. ಸ್ವಚ್ಛ ಗ್ರಾಮ ಟಾಸ್ಕ್‌ ಫೋರ್ಸ್‌ ಕಳೆದ 2 ತಿಂಗಳಿನಿಂದ ನಿರಂತರವಾಗಿ ಪ್ರತೀ ಗುರುವಾರ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಜಾಗೃತಿ ಕೆಲಸ ಮಾಡುತ್ತಿದೆ.  ಇದೀಗ ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ಜಾಗೃತಿ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುತ್ತಿದೆ. 

ಗುತ್ತಿಗಾರು ಗ್ರಾಮ ಪಂಚಾಯತ್‌, ಸ್ವಚ್ಛಗ್ರಾಮ ಟಾಸ್ಕ್‌ಫೋರ್ಸ್‌, ವರ್ತಕ ಸಂಘ ಗುತ್ತಿಗಾರು, ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ಹಾಗೂ ಇತರ ಎಲ್ಲಾ ಸಂಘಟನೆಗಳ ಪ್ರಮುಖರು ಪ್ರತೀ ಗುರುವಾರ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಈ ಮೂಲಕ ಸ್ವಚ್ಛ ಗ್ರಾಮದ ಉದ್ದೇಶವನ್ನು ಹೊಂದಿದ್ದಾರೆ. ಈಗಾಗಲೇ ವರ್ತಕರಿಗೆ, ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ, ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡಲು, ಬಟ್ಟೆ ಚೀಲಗಳ ಬಳಕೆ ಸೇರಿದಂತೆ ಪರಿಸರ ಸ್ನೇಹಿಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗಿದೆ. ಇದೀಗ ಪೊರಕೆಯಿಂದ ಸ್ವಚ್ಛತೆ ಮಾಡುವ ಮೂಲಕ ಇನ್ನೊಂದು ಸುತ್ತಿನ ಅಭಿಯಾನ ಆರಂಭಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು
September 26, 2026
7:21 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ
September 26, 2026
7:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror