ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್ ಸುತ್ತಳತೆಯಲ್ಲಿ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್‌ಗಳನ್ನು ತೆರವುಗೊಳಿಸಲು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ಆದೇಶಿಸಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಸೂಚಿಸಿರುವಂತೆ ಪಾಲಿಕೆ ವ್ಯಾಪ್ತಿಯಲ್ಲಿನ ಪಾದಚಾರಿ ಮಾರ್ಗಗಳು ಅಥವಾ ರಸ್ತೆಗಳಲ್ಲಿ ಇರುವಂತಹ ಮರಗಳ ಸುತ್ತ ಕನಿಷ್ಠ 1 ಮೀಟರ್ ಸುತ್ತಳತೆಯಲ್ಲಿ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೂಡಲೇ ತೆರವುಗೊಳಿಸಬೇಕು. ಜೊತೆಗೆ ಕಿರಿದಾದ ರಸ್ತೆಗಳು ಮತ್ತು ಮಾರ್ಗಗಳಲ್ಲಿ, ಸಾಧ್ಯವಾದಷ್ಟು, ಮರಗಳ ಸುತ್ತಲೂ ಕನಿಷ್ಠ 1 ಚದರ ಮೀಟರ್‌ನಷ್ಟು ಡಾಂಬರು ಹಾಕದ ಅಥವಾ ಕಚ್ಚಾ ಪರಿಣಾಮಕಾರಿ ಪ್ರದೇಶವನ್ನು ಬಿಡಲು ಆದೇಶಿಸಿದ್ದಾರೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel