ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸುವ ಕಾರ್ಯ ಆರಂಭವಾಗಿದೆ ಎಂದು ಮುಳಬಾಗಿಲು ತಾಲೂಕಿನ ತಹಸೀಲ್ದಾರ್ ವಿ.ಗೀತಾ ತಿಳಿಸಿದ್ದಾರೆ. ಸಾರ್ವಜನಿಕರ ಆಸ್ತಿ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಒತ್ತುವರಿ ತೆರವುಗೊಳಿಸಲು ಅರ್ಜಿಗಳು ಸ್ವೀಕೃತವಾಗಿವೆ. ಆದ್ದರಿಂದ ತಾಲೂಕಿನಾದ್ಯಂತ ಕೆರೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ. ಮೊದಲು ದೇವರಾಯಸಮುದ್ರ ಗ್ರಾಮ ಪಂಚಾಯತ್‌ನಲ್ಲಿ ತೆರವು ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel