ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ರಾಜ್ಯದ 14 ಜಿಲ್ಲೆಗಳಲ್ಲಿ ಶೀತಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ತೀವ್ರವಾಗಿ ಕುಸಿದಿದ್ದು, ಬೆಳಗ್ಗೆಯೇ ದಟ್ಟ ಮಂಜು ಮತ್ತು ಚಳಿ ಆವರಿಸುತ್ತಿದೆ. ಬೀದರ್, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದ್ದು. ಈ ಕಾರಣದಿಂದ ಮಕ್ಕಳು ಬೆಳಿಗ್ಗೆ ಬೇಗ ಶಾಲೆಗೆ ಹೋಗುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಚಳಿಗಾಳಿ ಹೆಚ್ಚಾಗಿರುವುದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ ರಾಜ್ಯದಲ್ಲಿ ಚಳಿಗಾಳಿ ಮುಗಿಯುವ ವರೆಗೆ ಪ್ರತಿದಿನ ಬೆಳಗ್ಗೆ 9.30ಕ್ಕೆ ಆರಂಭಿಸಬೇಕು ಎಂದು ಮಕ್ಕಳ ಹಕ್ಕುಹಳ ರಕ್ಷಣಾ ಆಯೋಗ ಇಲಾಖೆಗೆ ಪತ್ರವನ್ನು ಬರೆದಿದೆ. ಪೋಷಕರು ಮತ್ತು ಶಿಕ್ಷಣ ತಜ್ಞರು ಈ ಮನವಿಯನ್ನು ಒಪ್ಪಿಕೊಂಡಿದ್ದು, ಇಲಾಖೆಯು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…