MIRROR FOCUS

ಮುಂದುವರಿದ ಮಳೆ | ವಿಪರೀತ ಬಿಸಿಲು-ವಿಪರೀತ ಮಳೆ | ಈ ಬಾರಿ ಕೃಷಿ ಹಾನಿ ಅಪಾರ

Share

ಹವಾಮಾನ ವೈಪರೀತ್ಯ ಈ ಬಾರಿ ರಾಜ್ಯದ ಕೃಷಿಕರಿಗೆ ಸಮಸ್ಯೆ ತಂದೊಡ್ಡಿದೆ. ಈ ಬಾರಿ ವಿಪರೀತ ತಾಪಮಾನದ ಕಾರಣದಿಂದ ಹಲವು ಬೆಳೆಗಳು ನಾಶವಾದವು. ಇದೀಗ ಮತ್ತೆ ಮತ್ತೆ ಭಾರೀ ಮಳೆಯಾಗುತ್ತಿರುವುದರಿಂದ ಉಳಿದ ಬೆಳೆಯ ಮೇಲೂ ಪರಿಣಾಮ ಬೀರುತ್ತಿದೆ. ರಾಜ್ಯದ ಬಹುತೇಕ ಎಲ್ಲಾ ಕೃಷಿಯ ಮೇಲೂ ಈಗಿನ ವಾತಾವರಣ ಪರಿಣಾಮ ಬೀರುತ್ತಿದೆ.

Advertisement

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ಮೂಡಿಗೆರೆ, ಆಲ್ದೂರು, ಆವತಿ ಭಾಗದ ಕೆಲ ತೋಟಗಳಲ್ಲಿ ಮಳೆಯಿಂದ ಕಾಫಿ ಕಾಯಿಗಳು ಉದುರಿಹೋಗಿವೆ. ಫಸಲು ಬಿಟ್ಟಿರುವ ಕಾಫಿ ಹಾಗು ಕಾಳು ಮೆಣಸಿನ ಬಳ್ಳಿಗಳಿಗೆ ಮಳೆಯಿಂದ ಹಾನಿ ಉಂಟಾಗುವ ಸಂಭವವಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುಮಾರು 9 ಮಿಲಿ ಮೀಟರ್ ಮಳೆಯಾಗಿದೆ. ಮಳೆಯಿಂದಾಗಿ ರೈತರು ಬೆಳೆ ಹಾನಿ ನಷ್ಟದ ಭೀತಿ ಎದುರಿಸುತ್ತಿದ್ದಾರೆ.

ಹಾವೇರಿಯಲ್ಲಿ ಸುರಿದ ಭಾರೀ ಮಳೆಗೆ ಗೋವಿನಜೋಳ, ಶೇಂಗಾ, ಹತ್ತಿ, ಸೋಯಾಬೀನ್, ಭತ್ತ, ಮೆಣಸಿನಕಾಯಿ, ಸೌತೆಕಾಯಿ, ಟೊಮೆಟೊ ಸೇರಿದಂತೆ ಹಲವು ಬೆಳೆಗಳು ಮಳೆಯಿಂದಾಗಿ ನೆಲಕಚ್ಚಿವೆ. ಒಂದು ಸಾವಿರ ಹೆಕ್ಟೇರ್ ಜಮೀನಿನಲ್ಲಿದ್ದ ಬೆಳೆ ಹಾನಿಯಾಗಿದೆ.

ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ  ತುಂತುರು ಮಳೆಯಾಗುತ್ತಿದೆ. ಕೋಸು, ಟೊಮ್ಯಾಟೊ, ಹೂವು ಬೆಳೆಗಾರರು ಮಳೆಯಿಂದ ಕಂಗಾಲಾಗಿದ್ದಾರೆ.  ಆಲೂಗಡ್ಡೆ ಮತ್ತು ಟೊಮ್ಯಾಟೊ ಬೆಳೆಗೆ ಶೀಲಿಂದ್ರದಿಂದ  ಬರುವ ಅಂಗಮಾರಿ ರೋಗ ಉಲ್ಬಣವಾಗುವ ಸಾಧ್ಯತೆ ಇದೆ.

ನವಲಗುಂದ ತಾಲೂಕಿನಲ್ಲಿ 250 ಹೆಕ್ಟೇರ್ ಪ್ರದೇಶದ ನೆಲಗಡಲೆ , 4500 ಹೆಕ್ಟೇರ್ ಪ್ರದೇಶದ ಗೋವಿನಜೋಳ ಹಾಗೂ 4,200 ಹೆಕ್ಟೇರ್ ಪ್ರದೇಶದ ಹತ್ತಿ ಸೇರಿ ಒಟ್ಟು 8,950 ಹೆಕ್ಟೇರ್ ಪ್ರದೇಶದ ಕೃಷಿ ಬೆಳೆ ಮಳೆಯಿಂದ ಹಾನಿಯಾಗಿದೆ.

ನವಲಗುಂದ ತಾಲೂಕಿನಲ್ಲಿ 15 ಹೆಕ್ಟೇರ್ ಪ್ರದೇಶದ ಈರುಳ್ಳಿ ಬೆಳೆಯು ಮಳೆಯಿಂದ ಹಾನಿಯಾಗಿದೆ. ಕುಂದಗೋಳ ತಾಲೂಕಿನಲ್ಲಿ 500 ಹೆಕ್ಟೇರ್ ಪ್ರದೇಶದ ಮೆಣಸಿನಕಾಯಿ ಬೆಳೆಯು ಮಳೆಯಿಂದ ಹಾನಿಯಾಗಿದೆ. ಧಾರವಾಡ ತಾಲೂಕಿನಲ್ಲಿ 20 ಹೆಕ್ಟೇರ್ ವಿವಿಧ ತರಕಾರಿ ಬೆಳೆ ಹಾಗೂ 40 ಹೆಕ್ಟೇರ್ ಹೂವಿನ ಬೆಳೆಯು  ಮಳೆಯಿಂದ ಹಾನಿಯಾಗಿದೆ. ಧಾರವಾಡ ಜಿಲ್ಲೆಯಲ್ಲಿ ಜೂನ್ ಮತ್ತು ಅಕ್ಟೋಬರ ಎರಡು ತಿಂಗಳಲ್ಲಿ ಒಟ್ಟು 34,303.85 ಹೆಕ್ಟೇರ್ ಪ್ರದೇಶದ ವಿವಿಧ  ಬೆಳೆಗಳು ಮಳೆಯಿಂದ ಹಾನಿಯಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಅಡಿಕೆಗೆ ಕೊಳೆರೋಗ ಬಾಧಿಸಿ ಇದೀಗ ಅಡಿಕೆ ಮರಗಳೂ ಸಾಯುವ ಸ್ಥಿತಿಗೆ ಬಂದಿದೆ. ಸುಳಿ ಕೊಳೆರೋಗ ಬಾಧಿಸುತ್ತಿದೆ. ಈ ಬಾರಿ ಬೇಸಗೆಯಲ್ಲಿ ವಿಪರೀತ ತಾಪಮಾನದಿಂದ ಅಡಿಕೆ ಇಳುವರಿ ಮೇಲೂ ಪರಿಣಾಮ ಬೀರಿತ್ತು.ಚಿಕ್ಕಮಗಳೂರು ಸೇರಿದಂತೆ ಮಡಿಕೇರಿ, ಹಾಸನ ಪ್ರದೇಶದಲ್ಲಿ ಏಲಕ್ಕಿ ಬೆಳೆಯ ಮೇಲೂ ಈ ಬಾರಿಯ ಮಳೆ ಪರಿಣಾಮ ಬೀರಿದೆ.

The recent weather extremes have posed a significant challenge for farmers in the state. Many crops have been destroyed due to the extreme temperatures, and the persistent rainfall is now impacting the remaining crops. The current climate conditions are adversely affecting nearly all agricultural activities in the state.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-04-2025 | ಎ.26 ರಿಂದ ರಾಜ್ಯದ ವಿವಿದೆಡೆ ಮಳೆ ಪ್ರಮಾಣ ಹೆಚ್ಚಳ |

ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.

14 minutes ago

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…

15 hours ago

ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ…

15 hours ago

ಬದುಕು ಕಲಿಸುವ ಪಾಠಗಳು

ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…

15 hours ago

82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ

ಸಕಲಜೀವಿಗಳ ಆಡುಂಬೊಲ ನಮ್ಮೀ  ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…

16 hours ago