AI ಮೂಲಕ ಹವಾಮಾನ ಅಪಾಯ ಮುನ್ಸೂಚನೆ | ಸಾರ್ವಜನಿಕ ಸಂಸ್ಥೆಗಳಲ್ಲಿ ಅಳವಡಿಕೆ ಯೋಜನೆ

February 6, 2026
6:31 AM

ಹವಾಮಾನ ವೈಪರೀತ್ಯವು ಜನರ ಆರೋಗ್ಯದ ಮೇಲೆ ನೇರ ಮತ್ತು ಪರೋಕ್ಷ ಪರಿಣಾಮ ಬೀರುತ್ತಿದ್ದು, ಇದರಿಂದ ಜೀವನೋಪಾಯದ ಗುಣಮಟ್ಟವೂ ಕುಸಿಯುತ್ತಿದೆ. ಈ ಸವಾಲಿಗೆ ತಂತ್ರಜ್ಞಾನ ಆಧಾರಿತ ಪರಿಹಾರ ರೂಪದಲ್ಲಿ ಕೃತಕ ಬುದ್ಧಿಮತ್ತೆ (AI) ಮಾದರಿಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿರುವ ಕಾರ್ಯಕ್ರಮ ವ್ಯವಸ್ಥಾಪಕ ಹರೀಶ್ ನಲವಡೆ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಹವಾಮಾನ ಬದಲಾವಣೆಯಿಂದ ಉಂಟಾಗುವ ಅಪಾಯಗಳು ಆರೋಗ್ಯ, ಕೃಷಿ ಹಾಗೂ ಇತರ ಜೀವನೋಪಾಯ ಆಧಾರಿತ ಕ್ಷೇತ್ರಗಳ ಮೇಲೆ ಪರಿಣಾಮ ಬೀರುತ್ತಿವೆ. ಇದನ್ನು ಗಮನದಲ್ಲಿಟ್ಟುಕೊಂಡು, AI ಆಧಾರಿತ ಹವಾಮಾನ ಅಪಾಯ ಮುನ್ಸೂಚನಾ ಮಾದರಿಯನ್ನು ರೂಪಿಸಲಾಗಿದ್ದು, ಮುಂಚಿತ ಎಚ್ಚರಿಕೆ ನೀಡುವ ಮೂಲಕ ಜನರ ಬದುಕು ಮತ್ತು ಆದಾಯವನ್ನು ರಕ್ಷಿಸುವುದು ಇದರ ಉದ್ದೇಶವಾಗಿದೆ ಎಂದು ಹೇಳಿದರು.

ಅಭಿವೃದ್ಧಿಪಡಿಸಿರುವ ಈ AI ಮಾದರಿ, ಹವಾಮಾನ ವೈಪರೀತ್ಯದಿಂದ ಉಂಟಾಗುವ ಅಪಾಯಗಳನ್ನು ಮುಂಚಿತವಾಗಿ ಗುರುತಿಸಿ, ಸಾರ್ವಜನಿಕ ಸಂಸ್ಥೆಗಳು ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳಲು ನೆರವಾಗಲಿದೆ. ಮುಂದಿನ ಹಂತದಲ್ಲಿ ಈ ತಂತ್ರಜ್ಞಾನವನ್ನು ವಿವಿಧ ಸರ್ಕಾರಿ ಹಾಗೂ ಸಾರ್ವಜನಿಕ ಸಂಸ್ಥೆಗಳಲ್ಲಿ ಅಳವಡಿಸುವ ಯೋಜನೆಯೂ ಇದೆ ಎಂದು ಹರೀಶ್ ನಲವಡೆ ವಿವರಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಆರ್ಟ್ ಪಾರ್ಕ್’, ಕೃತಕ ಬುದ್ಧಿಮತ್ತೆ ಮತ್ತು ಉದಯೋನ್ಮುಖ ತಂತ್ರಜ್ಞಾನಗಳ ಮೂಲಕ ಸಮಾಜಮುಖಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಲವು ನಾವೀನ್ಯತೆಗಳನ್ನು ರೂಪಿಸುತ್ತಿದ್ದು, ಈ AI ಹವಾಮಾನ ಮಾದರಿ ಅದರ ಯಶಸ್ವಿ ಉದಾಹರಣೆಯಾಗಿದೆ.

ಇದನ್ನೂ ಓದಿ….

WHO ಹೇಳಿದ್ದೇ ಅಂತಿಮ ಸತ್ಯವೇ..? | ವಿಜ್ಞಾನ, ಪ್ರಶ್ನೆ ಮತ್ತು ಪ್ರಜ್ಞಾವಂತ ನಾಗರಿಕ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror