ಹವಾಮಾನ ವೈಪರೀತ್ಯವು ಜನರ ಆರೋಗ್ಯದ ಮೇಲೆ ನೇರ ಮತ್ತು ಪರೋಕ್ಷ ಪರಿಣಾಮ ಬೀರುತ್ತಿದ್ದು, ಇದರಿಂದ ಜೀವನೋಪಾಯದ ಗುಣಮಟ್ಟವೂ ಕುಸಿಯುತ್ತಿದೆ. ಈ ಸವಾಲಿಗೆ ತಂತ್ರಜ್ಞಾನ ಆಧಾರಿತ ಪರಿಹಾರ ರೂಪದಲ್ಲಿ ಕೃತಕ ಬುದ್ಧಿಮತ್ತೆ (AI) ಮಾದರಿಯನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿರುವ ಕಾರ್ಯಕ್ರಮ ವ್ಯವಸ್ಥಾಪಕ ಹರೀಶ್ ನಲವಡೆ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಹವಾಮಾನ ಬದಲಾವಣೆಯಿಂದ ಉಂಟಾಗುವ ಅಪಾಯಗಳು ಆರೋಗ್ಯ, ಕೃಷಿ ಹಾಗೂ ಇತರ ಜೀವನೋಪಾಯ ಆಧಾರಿತ ಕ್ಷೇತ್ರಗಳ ಮೇಲೆ ಪರಿಣಾಮ ಬೀರುತ್ತಿವೆ. ಇದನ್ನು ಗಮನದಲ್ಲಿಟ್ಟುಕೊಂಡು, AI ಆಧಾರಿತ ಹವಾಮಾನ ಅಪಾಯ ಮುನ್ಸೂಚನಾ ಮಾದರಿಯನ್ನು ರೂಪಿಸಲಾಗಿದ್ದು, ಮುಂಚಿತ ಎಚ್ಚರಿಕೆ ನೀಡುವ ಮೂಲಕ ಜನರ ಬದುಕು ಮತ್ತು ಆದಾಯವನ್ನು ರಕ್ಷಿಸುವುದು ಇದರ ಉದ್ದೇಶವಾಗಿದೆ ಎಂದು ಹೇಳಿದರು.
ಅಭಿವೃದ್ಧಿಪಡಿಸಿರುವ ಈ AI ಮಾದರಿ, ಹವಾಮಾನ ವೈಪರೀತ್ಯದಿಂದ ಉಂಟಾಗುವ ಅಪಾಯಗಳನ್ನು ಮುಂಚಿತವಾಗಿ ಗುರುತಿಸಿ, ಸಾರ್ವಜನಿಕ ಸಂಸ್ಥೆಗಳು ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳಲು ನೆರವಾಗಲಿದೆ. ಮುಂದಿನ ಹಂತದಲ್ಲಿ ಈ ತಂತ್ರಜ್ಞಾನವನ್ನು ವಿವಿಧ ಸರ್ಕಾರಿ ಹಾಗೂ ಸಾರ್ವಜನಿಕ ಸಂಸ್ಥೆಗಳಲ್ಲಿ ಅಳವಡಿಸುವ ಯೋಜನೆಯೂ ಇದೆ ಎಂದು ಹರೀಶ್ ನಲವಡೆ ವಿವರಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಆರ್ಟ್ ಪಾರ್ಕ್’, ಕೃತಕ ಬುದ್ಧಿಮತ್ತೆ ಮತ್ತು ಉದಯೋನ್ಮುಖ ತಂತ್ರಜ್ಞಾನಗಳ ಮೂಲಕ ಸಮಾಜಮುಖಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಲವು ನಾವೀನ್ಯತೆಗಳನ್ನು ರೂಪಿಸುತ್ತಿದ್ದು, ಈ AI ಹವಾಮಾನ ಮಾದರಿ ಅದರ ಯಶಸ್ವಿ ಉದಾಹರಣೆಯಾಗಿದೆ.
ಇದನ್ನೂ ಓದಿ….
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…