ಈಚೆಗೆ ಪರಿಸರ ಸ್ನೇಹಿ ಕಾಳಜಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲಾಗುತ್ತಿದೆ. ಎಲ್ಲೆಡೆಯೂ ಪ್ಲಾಸ್ಟಿಕ್ ಚೀಲದ ಬದಲಿಗೆ ಬಟ್ಟೆ ಚೀಲ ಬಳಕೆಗೆ ಆದ್ಯತೆ ನೀಡಲಾಗುತ್ತಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮರಕತ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಬಟ್ಟೆ ಚೀಲಗಳನ್ನು ಸಂಜೀವಿನಿ ಸಂಘದ ಸದಸ್ಯರು ನೀಡಿದ್ದಾರೆ.
Advertisement
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೀಪ ಸಂಜೀವಿನಿ ಸಂಘದ ಸದಸ್ಯರು ಬಟ್ಟೆ ಚೀಲ ತಯಾರಿಕೆಯಲ್ಲಿ ತೊಡಗಿದ್ದಾರೆ. ಈ ಸಂದರ್ಭ ಮರಕತ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ವತಿಯಿಂದ ಪ್ರಥಮವಾಗಿ ದೊರೆತ ಬಟ್ಟೆಯ ಚೀಲದ ಆರ್ಡರ್ ಸ್ವೀಕರಿಸಿ ಚೀಲ ತಯಾರಿಸಿ ಮರಕತ ದೇವಸ್ಥಾನದ ವ್ಯವಸ್ಥಾಪನ ಸಮಿತಿಯವರಿಗೆ ಹಸ್ತಾಂತರಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement