13.11.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ
ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 13 ರಂದು ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 14 ರಿಂದ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 13 ರಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಇನ್ನೆರಡು ದಿನಗಳ ಕಾಲ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿದ್ದು, ನಂತರ ಕಡಿಮೆಯಾದರೂ, ನವೆಂಬರ್ 16 ರಿಂದ ಮತ್ತೆ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯಲ್ಲಿ ಹಿಂಗಾರು ಮಾರುತಗಳು ಚುರುಕಾಗಿದ್ದು, ಜೊತೆಯಲ್ಲಿ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಛಳಿ ಗಾಳಿಯ ಪ್ರಭಾವದಿಂದ ದಕ್ಷಿಣ ಒಳನಾಡಿನಲ್ಲಿ ಮಾತ್ರ ಮಳೆಯ ಸಾಧ್ಯತೆಗಳಿವೆ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…