27.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. …..ಮುಂದೆ ಓದಿ….
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಡಿಸೆಂಬರ್ 27 ರಂದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು 28 ರಿಂದ ಒಂದೆರಡು ದಿನಗಳ ಕಾಲ ಮೋಡವಿದ್ದರೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಡಿಸೆಂಬರ್ 27 ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, 28 ರಿಂದ ಮೋಡ ಹಾಗೂ ಮತ್ತೆರಡು ದಿನಗಳಲ್ಲಿ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಕರ್ನಾಟಕ – ಮಹಾರಾಷ್ಟ್ರ ಗಡಿ ಭಾಗಗಳ ಅಲ್ಲಲ್ಲಿ, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ದಕ್ಷಿಣ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಮಾತ್ರ ಇರಬಹುದು.
ಈಗಿನಂತೆ ಡಿಸೆಂಬರ್ 27ರಂದು ದಕ್ಷಿಣ ಒಳನಾಡಿನ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, 28 ರಿಂದ ಕಡಿಮೆಯಾಗಿ ಒಂದೆರಡು ದಿನಗಳ ಕಾಲ ಮೋಡ ಮಾತ್ರ ಇರಬಹುದು. ನಂತರ ಒಣಹವೆ ಆವರಿಸುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಹಿಂಗಾರು ರೀತಿ ಬೀಸುತ್ತಿರುವುದರಿಂದ ಡಿಸೆಂಬರ್ ಕೊನೆಯ ತನಕ ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗಿದೆ. ಈ ಗಾಳಿಯ ಪ್ರಭಾವ ಕಡಿಮೆಯಾಗುತ್ತಿದ್ದಂತೆಯೇ ರಾಜ್ಯದಾದ್ಯಂತ ಒಣ ಹವೆ ಆವರಿಸಲಿದೆ. ಜನವರಿಯಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.