22.02.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :………ಮುಂದೆ ಓದಿ……..
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಈ ವಾತಾವರಣವು ಫೆಬ್ರವರಿ 24ರ ತನಕ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಫೆಬ್ರವರಿ 24ರ ತನಕ ಮುಂದುವರಿಯುವ ಈ ವಾತಾವರಣವು ನಂತರ ಕಡಿಮೆಯಾಗಿ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.
ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಬಂಗಾಳ ಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಈ ವಾತಾವರಣವು ಉಂಟಾಗಿರಬಹುದು. ಈಗಿನಂತೆ ಫೆಬ್ರವರಿ 25ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವೆ ಆವರಿಸುವ ಲಕ್ಷಣಗಳಿವೆ.
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…
ಪ್ರವಾಸಿಗರು ಸೇರಿದಂತೆ ಜನರು ಮುಳ್ಳಯ್ಯನಗಿರಿ ಪರ್ವತ ಶ್ರೇಣಿ ಹಾಗೂ ಅರಣ್ಯ ಪ್ರದೇಶಕ್ಕೆ ತೆರಳಿ…