ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ದಿ ಯೋಜನೆಯಡಿಯಲ್ಲಿ 1277 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟಾಗಿ 95 ಕೋಟಿ ರೂಪಾಯಿ ಲಭ್ಯವಾಗಿದೆ. ಇಡೀ ರಾಜ್ಯದಲ್ಲಿ ಅತೀ ಹೆಚ್ಚು ಅನುದಾನ ಲಭ್ಯವಾದ ಎರಡನೇ ಜಿಲ್ಲೆ ದ ಕ ಜಿಲ್ಲೆಯಾಗಿದೆ. ಆದರೆ ಈ ಪಟ್ಟಿಯಲ್ಲಿ ಸುಳ್ಯದ ಹೆಸರಿಲ್ಲ ಹಾಗೂ ಸುಳ್ಯದ ಸಚಿವರು ಇರುವುದರಿಂದ ಅನುದಾನಗಳ ವಿಶೇಷ ಪ್ಯಾಕೇಜ್ ಲಭ್ಯವಾಗಲಿದೆ ಎಂಬ ಚರ್ಚೆ ಈಗ ಆರಂಭವಾಗಿದೆ.
ಮುಖ್ಯಮಂತ್ರಿಗಳ ಬದಲಾವಣೆ ಸೇರಿದಂತೆ ರಾಜ್ಯದಲ್ಲಿ ರಾಜಕೀಯದ ವಿವಿಧ ಚರ್ಚೆಗಳ ನಡುವೆಯೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವಿಶೇಷವಾಗಿ ಅನುದಾನಗಳ ಹಂಚಿಕೆ ಮಾಡಿದ್ದಾರೆ. ಈ ಅನುದಾನ ಹಂಚಿಕೆ ಪಟ್ಟಿ ಪ್ರಕಾರ ಅತ್ಯಧಿಕವಾಗಿ ಬೆಳಗಾವಿ ಜಿಲ್ಲೆಗೆ 121 ಕೋಟಿ ರೂಪಾಯಿ ಹಂಚಿಕೆ ಮಾಡಿದ್ದರೆ ಎರಡನೇ ಅಧಿಕ ಜಿಲ್ಲೆಯಾಗಿ ದ ಕ ಜಿಲ್ಲೆಗೆ 95 ಕೋಟಿ ರೂಪಾಯಿ ನೀಡಿದ್ದಾರೆ. ಅದರಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಹೆಸರು ಕಾಣಿಸುತ್ತಿಲ್ಲ. ಆದರೆ ಸುಳ್ಯದ ಸಚಿವರು ಕ್ಯಾಬಿನೆಟ್ ನಲ್ಲಿ ಇರುವುದರಿಂದ ಸುಳ್ಯದ ಬೇಡಿಕೆಗಳ ಪಟ್ಟಿ ಹೆಚ್ಚಿರುವುದರಿಂದ ಮುಂದೆ ವಿಶೇಷ ಪ್ಯಾಕೇಜ್ ಘೋಷಣೆಯಾಗಲಿದೆ ಎಂಬ ಮಾಹಿತಿ ಇದೆ. ಸಚಿವರು ಇರುವ ಪ್ರದೇಶಗಳಿಗೆ ಈ ವಿಶೇಷ ಪ್ಯಾಕೇಜ್ ನಲ್ಲಿ ಹೆಚ್ಚಿನ ಅನುದಾನ ನೀಡಿಲ್ಲ ಎಂಬುದು ಸದ್ಯದ ಮಾಹಿತಿಯಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿಗೆ ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಸಂಪರ್ಕಕ್ಕೆ ಲಭ್ಯವಾಗಿಲ್ಲ.
ಈ ಹಿಂದೆ ಕೂಡಾ ಸುಳ್ಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆಯನ್ನು ಅಂದು ಮುಖ್ಯಮಂತ್ರಿಯಾಗಿದ್ದ ವೇಳೆ ಡಿ ವಿ ಸದಾನಂದ ಗೌಡ ಅವರು ಮಾಡಿದ್ದರು. ಇದೀಗ ಅದೇ ಮಾದರಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆಯಾಗಲಿದೆ ಎಂಬುದು ಈಗ ಚರ್ಚೆ ಆಗುತ್ತಿರುವ ಸಂಗತಿಯಾಗಿದೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…