ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಳ್ಳಿಗಳ ಜನರು ಸ್ವಾವಲಂಬಿಗಳಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ನಗರದ ವಿಧಾನಸೌಧದಲ್ಲಿ ಹುತಾತ್ಮರ ದಿನಾಚರಣೆ ಪ್ರಯುಕ್ತ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹತ್ಮಾಗಾಂಧೀಜಿ ದೇಶಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಇಂದು ಸ್ಮರಿಸಲಾಗುತ್ತಿದೆ ಎಂದರು. ರಾಜ್ಯದಲ್ಲಿ ಗ್ರಾಮೀಣ ಮಟ್ಟದಲ್ಲಿ ಪಂಚಾಯಿತಿಗಳ ಶಕ್ತೀಕರಣಕ್ಕೆ ಒತ್ತು ನೀಡಲಾಗುತ್ತಿದ್ದು, ರಾಜ್ಯದ ಸುಮಾರು 6 ಸಾವಿರ ಪಂಚಾಯಿತಿಗಳಿಗೆ ಮಹತ್ಮಾಗಾಂಧೀಜಿ ಹೆಸರು ಇಡಲಾಗುವುದು ಎಂದು ತಿಳಿಸಿದ್ದಾರೆ. ಹಳ್ಳಿಗಳ ಜನರು ಆರ್ಥಿಕ ಸ್ವಾವಲಂಬನೆ ಸಾಧಿಸಿದಾಗ ಮಾತ್ರ ಗ್ರಾಮೀಣ ಅಭಿವೃದ್ಧಿ ಸಾಧ್ಯ. ಜೊತೆಗೆ ಶಿಕ್ಷಣ ಹಾಗೂ ರಾಜಕೀಯ ಜಾಗೃತಿಯೂ ಅಗತ್ಯವೆಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




