#KarnatakaBudget | ಇಂದು 14ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ | ಗ್ಯಾರಂಟಿಗಳ ಬಗ್ಗೆ ಹೆಚ್ಚಿದ ಕುತೂಹಲ |

July 7, 2023
11:18 AM
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇಂದು 14ನೇ ಬಾರಿ ಬಜೆಟ್ ಮಂಡನೆ ನಡೆಯಲಿದೆ. ಸರ್ಕಾರದ 5 ಗ್ಯಾರಂಟಿಗಳ ನಡುವೆ ನಿರೀಕ್ಷೆಗಳು ಹೆಚ್ಚಿದೆ. ಈ ಯೋಜನೆಗಳಿಗೆ ಹಣ ಹೇಗಿ ಹೊಂದಿಸುವರು ಎನ್ನುವುದು ಕುತೂಹಲವಾಗಿದೆ.

ನೂತನ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗುತ್ತಾ ಬರುತ್ತಿದೆ. ಈ ಮಧ್ಯೆ ಸರ್ಕಾರ ಅನೇಕ ಯೋಜನೆಗಳನ್ನು ಘೋಷಿಸಿದೆ. ಅದರ ಆರ್ಥಿಕ ರೂಪು ರೇಷೆಯನ್ನು ಇಂದು ರಾಜ್ಯದ ಜನತೆಯ ಮುಂದೆ ಇಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ #Siddaramaiah ಅವರು ಇಂದು 14ನೇ ಬಾರಿ ಬಜೆಟ್ #Budget ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್‍ನಲ್ಲಿ ಕಾಂಗ್ರೆಸ್ #Congress ಸರ್ಕಾರದ 5 ಗ್ಯಾರಂಟಿಗಳ ನಡುವೆ ನಿರೀಕ್ಷೆಗಳು ಹೆಚ್ಚಿವೆ.

ಸರ್ಕಾರ ಬಂದರೆ ಭರವಸೆ ಈಡೇರಿಸುತ್ತೇವೆ ಎಂದಿದ್ದ 5 ಪ್ರಮುಖ ಭರವಸೆಗಳಿಗೆ ಬಜೆಟ್ ನಲ್ಲಿ ಮಾನ್ಯತೆ ಸಿಗುತ್ತಾ?. ಐದು ಗ್ಯಾರಂಟಿ #Guarantee ಅನುಷ್ಠಾನದ ಹೊರೆ ಜೊತೆ ಆರ್ಥಿಕ ವ್ಯವಸ್ಥೆ ಸರಿದೂಗಿಸಿಕೊಂಡು ಕೊಟ್ಟಿದ್ದ 5 ಭರವಸೆಯನ್ನು ಸಿಎಂ ಈಡೇರಿಸ್ತಾರಾ ಎಂಬ ಪ್ರಶ್ನೆ ಎದ್ದಿದೆ. ಗ್ಯಾರಂಟಿ ಅನುಷ್ಠಾನದ ಜೊತೆ ಪ್ರಣಾಳಿಕೆಯಲ್ಲಿ #manifesto ಘೋಷಣೆ ಮಾಡಿರುವ ಕೆಲವೊಂದು ಅಂಶಗಳನ್ನು ಅನುಷ್ಠಾನ ಮಾಡುವ ಸವಾಲು ಕೂಡ ಇದೆ. ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಅಂಶಗಳ ಅನುಷ್ಠಾನಕ್ಕೆ ಸಂಬಂಧಿಸಿ ಬಜೆಟ್ ನಲ್ಲಿ ಮಹತ್ವದ ಘೋಷಣೆಗಳ ನಿರೀಕ್ಷೆ ಇದೆ.

ಅಂಗನವಾಡಿ ಕಾರ್ಯಕರ್ತರ ಗೌರವಧನ 11,500 ರಿಂದ 15 ಸಾವಿರಕ್ಕೆ ಹೆಚ್ಚಳ ಘೋಷಣೆ ಮಡುವ ನಿರೀಕ್ಷೆ ಇದೆ. ಅಂಗನವಾಡಿ ಸಹಾಯಕರ ಗೌರವಧನ 7.500 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಆಶಾ ಕಾರ್ಯಕರ್ತೆಯರ ಗೌರವಧನ 5 ಸಾವಿರ ದಿಂದ 8 ಸಾವಿರಕ್ಕೆ ಹೆಚ್ಚಳ, ಬಿಸಿ ಊಟ ಕಾರ್ಯಕರ್ತೆಯರ ಗೌರವಧನ 3,700 ರಿಂದ 5 ಸಾವಿರಕ್ಕೆ ಹೆಚ್ಚಳ, ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಖಾಯಂ ಘೋಷಣೆ ನಿರೀಕ್ಷೆ ಇದೆ.

ಇನ್ನೂ ಹಲವು ಕಾರ್ಯಕ್ರಮಗಳಿಗೆ ಅವುಗಳೆಲ್ಲವನ್ನೂ ಅನುಷ್ಠಾನ ಮಾಡುವ ಸವಾಲು ಸಿದ್ದರಾಮಯ್ಯ ಸರ್ಕಾರದ ಮುಂದಿದೆ. ಈ ಎಲ್ಲಾ ಭರವಸೆಗಳನ್ನ ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ನೀಡಿದ್ದರು. ಆದ್ದರಿಂದ ಬಜೆಟ್ ನಲ್ಲಿ ಘೋಷಣೆ ಆಗಬಹುದು ಎಂಬ ನಿರೀಕ್ಷೆಯು ಹೆಚ್ಚಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror