ನೂತನ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಆಗುತ್ತಾ ಬರುತ್ತಿದೆ. ಈ ಮಧ್ಯೆ ಸರ್ಕಾರ ಅನೇಕ ಯೋಜನೆಗಳನ್ನು ಘೋಷಿಸಿದೆ. ಅದರ ಆರ್ಥಿಕ ರೂಪು ರೇಷೆಯನ್ನು ಇಂದು ರಾಜ್ಯದ ಜನತೆಯ ಮುಂದೆ ಇಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ #Siddaramaiah ಅವರು ಇಂದು 14ನೇ ಬಾರಿ ಬಜೆಟ್ #Budget ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್‍ನಲ್ಲಿ ಕಾಂಗ್ರೆಸ್ #Congress ಸರ್ಕಾರದ 5 ಗ್ಯಾರಂಟಿಗಳ ನಡುವೆ ನಿರೀಕ್ಷೆಗಳು ಹೆಚ್ಚಿವೆ.
ಅಂಗನವಾಡಿ ಕಾರ್ಯಕರ್ತರ ಗೌರವಧನ 11,500 ರಿಂದ 15 ಸಾವಿರಕ್ಕೆ ಹೆಚ್ಚಳ ಘೋಷಣೆ ಮಡುವ ನಿರೀಕ್ಷೆ ಇದೆ. ಅಂಗನವಾಡಿ ಸಹಾಯಕರ ಗೌರವಧನ 7.500 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಆಶಾ ಕಾರ್ಯಕರ್ತೆಯರ ಗೌರವಧನ 5 ಸಾವಿರ ದಿಂದ 8 ಸಾವಿರಕ್ಕೆ ಹೆಚ್ಚಳ, ಬಿಸಿ ಊಟ ಕಾರ್ಯಕರ್ತೆಯರ ಗೌರವಧನ 3,700 ರಿಂದ 5 ಸಾವಿರಕ್ಕೆ ಹೆಚ್ಚಳ, ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಖಾಯಂ ಘೋಷಣೆ ನಿರೀಕ್ಷೆ ಇದೆ.
ಇನ್ನೂ ಹಲವು ಕಾರ್ಯಕ್ರಮಗಳಿಗೆ ಅವುಗಳೆಲ್ಲವನ್ನೂ ಅನುಷ್ಠಾನ ಮಾಡುವ ಸವಾಲು ಸಿದ್ದರಾಮಯ್ಯ ಸರ್ಕಾರದ ಮುಂದಿದೆ. ಈ ಎಲ್ಲಾ ಭರವಸೆಗಳನ್ನ ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ನೀಡಿದ್ದರು. ಆದ್ದರಿಂದ ಬಜೆಟ್ ನಲ್ಲಿ ಘೋಷಣೆ ಆಗಬಹುದು ಎಂಬ ನಿರೀಕ್ಷೆಯು ಹೆಚ್ಚಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…