Advertisement
ಸುದ್ದಿಗಳು

ಯುವಜನತೆ ಕೃಷಿಗೆ ಬರಬೇಕು, ರೈತರು ಉದ್ಯಮಿಗಳಾಗಬೇಕು: ಸಿಎಂ ಸಿದ್ದರಾಮಯ್ಯ ಕರೆ

Share

ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಹಾಗೂ ರೈತರು ಉತ್ಪಾದನೋತ್ತರ ಚಟುವಟಿಕೆಗಳನ್ನು ಕೈಗೊಳ್ಳಲು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ–2026 ಹಾಗೂ ಉತ್ಪಾದನೋತ್ತರ ಕೃಷಿ – ರೈತರ ಸಬಲೀಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರು ಕೇವಲ ಬೆಳೆ ಬೆಳೆಯುವ ಮಟ್ಟಕ್ಕೆ ಸೀಮಿತರಾಗದೆ ಉದ್ಯಮಿಗಳಾಗಬೇಕು ಎಂದು ಅಭಿಪ್ರಾಯಪಟ್ಟರು. ರೈತರು ಉತ್ಪನ್ನಗಳ ಸಂಗ್ರಹಣೆ, ಸಂಸ್ಕರಣೆ, ಮಾರುಕಟ್ಟೆ ವ್ಯವಸ್ಥೆ ಹಾಗೂ ಉಪ ಉತ್ಪನ್ನಗಳ ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕಿದ್ದು, ಇದರಿಂದ ಕೃಷಿಗೆ ಹೆಚ್ಚುವರಿ ಆದಾಯ ಮತ್ತು ಮೌಲ್ಯ ಸೃಷ್ಟಿಯಾಗುತ್ತದೆ ಎಂದು ಹೇಳಿದರು.

ಕೃಷಿ ಕ್ಷೇತ್ರವನ್ನು ಬಲಪಡಿಸುವ ಉದ್ದೇಶದಿಂದ ಸರ್ಕಾರ ರೈತರಿಗೆ ವಿವಿಧ ರೀತಿಯ ನೆರವು ನೀಡುತ್ತಿದೆ ಎಂದು ಮುಖ್ಯಮಂತ್ರಿ ವಿವರಿಸಿದರು. ಬಿತ್ತನೆ ಬೀಜ, ಗೊಬ್ಬರ ಮತ್ತು ಕೀಟನಾಶಕಗಳ ಪೂರೈಕೆ, ಕೃಷಿ ಯಂತ್ರೋಪಕರಣಗಳ ಖರೀದಿಗೆ ₹1,500 ಕೋಟಿ ಸಹಾಯಧನ, ಬೆಳೆ ವಿಮೆ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲೇ ಅಗ್ರಸ್ಥಾನದಲ್ಲಿದೆ, ಈವರೆಗೆ ರೈತರಿಗೆ ₹6,000 ಕೋಟಿ ವಿಮಾ ಪರಿಹಾರ ವಿತರಿಸಲಾಗಿದೆ. ಇದಲ್ಲದೆ, ಕೃಷಿಭಾಗ್ಯ ಯೋಜನೆಯಡಿ ₹200 ಕೋಟಿ ಅನುದಾನ ನೀಡಲಾಗಿದೆ ಎಂದು ಅವರು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೃಷಿಯಲ್ಲಿ ತಂತ್ರಜ್ಞಾನ, ಮೌಲ್ಯವರ್ಧನೆ ಮತ್ತು ಉದ್ಯಮಶೀಲತೆ ಸೇರಿಕೊಂಡರೆ ಯುವಜನತೆಗೆ ಉತ್ತಮ ಭವಿಷ್ಯ ನಿರ್ಮಾಣವಾಗಲಿದೆ. ಆದ್ದರಿಂದ ಯುವಜನತೆ ಕೃಷಿಯನ್ನು ವೃತ್ತಿಯಾಗಿ ಸ್ವೀಕರಿಸಿ, ಹೊಸ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

ಇದನ್ನೂ ಓದಿ…

ನಿಮ್ಮ ಅಭಿಪ್ರಾಯಗಳಿಗೆ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

4 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

13 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

14 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

14 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

ದೇಶದ ವಿವಿದೆಡೆ ಮಾರ್ಚ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್‌ನಲ್ಲಿ ಅಸಾಮಾನ್ಯ ಹವಾಮಾನದಿಂದ…

1 day ago