ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಯಿ ಅವರು ಜು.12 ರಿಂದ ದ ಕ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಜು.12ರ ಮಂಗಳವಾರ ಮಧ್ಯಾಹ್ನ 2.30ಕ್ಕೆ ಕೊಡಗು ಜಿಲ್ಲೆಯ ಮಡಿಕೇರಿಯಿಂದ ನಿರ್ಗಮಿಸಿ, ರಸ್ತೆ ಮೂಲಕ ಸುಳ್ಯ ಮಾರ್ಗವಾಗಿ ಆಗಮಿಸಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸುವರು. ರಾತ್ರಿ 7.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳುವರು.
ಜು.13ರ ಬುಧವಾರ ಸಂಜೆ 6.30ಕ್ಕೆ ಉಡುಪಿಯಿಂದ ರಸ್ತೆ ಮಾರ್ಗವಾಗಿ ಹೊರಟು ರಾತ್ರಿ 7.30ಕ್ಕೆ ಮಂಗಳೂರಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 7.45ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel

