ಎ.27 | ದ ಕ ಜಿಲ್ಲೆಯಲ್ಲಿ ಮುಖ್ಯಮಂತ್ರಿ – ಸಚಿವರ ತಂಡವೇ ಪ್ರವಾಸ…! |

Advertisement

ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಎ.27ರ ಬುಧವಾರ ದ ಕ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.  ಮುಖ್ಯಮಂತ್ರಿಗಳು ಮಾತ್ರವಲ್ಲ ಎ.27 ರಂದು ರಾಜ್ಯದ ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ವಿ.ಸೋಮಣ್ಣ, ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್ , ಕಂದಾಯ ಸಚಿವರಾದ ಆರ್.ಅಶೋಕ್, ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಇವರುಗಳೂ ಜಿಲ್ಲೆಯಲ್ಲಿ ಪ್ರವಾಸದಲ್ಲಿ ಇರಲಿದ್ದಾರೆ.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಏ.27ರ ಬುಧವಾರ ಬೆಳಿಗ್ಗೆ 10.20ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.30ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿ, ಬೆಳಿಗ್ಗೆ 11.50ಕ್ಕೆ ಜಿಲ್ಲಾ ಪಂಚಾಯತ್‍ಗೆ ಆಗಮಿಸುವರು. ಮಧ್ಯಾಹ್ನ 12 ಗಂಟೆಗೆ ಜಿಲ್ಲಾಪಂಚಾಯತ್‍ನಲ್ಲಿ ಕೋವಿಡ್-19 ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.       ಮಧ್ಯಾಹ್ನ 3 ಗಂಟೆಗೆ ಮೂಡಬಿದಿರೆಗೆ ತೆರಳಿ ಅಲ್ಲಿನ ಎಕ್ಸಲೆಂಟ್ ಪಿ.ಯೂ ಕಾಲೇಜಿನ ನೂತನ ಅನ್ನದಾಸೋಹ ಕಟ್ಟಡವನ್ನು ಉದ್ಘಾಟಿಸುವರು. 3.30ಕ್ಕೆ  ಜೈನ ಬಸದಿಗೆ ಬೇಟಿ ನೀಡುವರು. ಸಂಜೆ 3.50ಕ್ಕೆ  ಮೂಡಬಿದಿರೆಯ ಪ್ರೆಸ್‍ಕ್ಲಬ್ ಆವರಣದಲ್ಲಿ ನೂತನ ಕಟ್ಟಡಕ್ಕೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವರು. ಸಂಜೆ 4 ಗಂಟೆಯಿಂದ 5.30ರ ವರೆಗೆ ಮೂಡಬಿದಿರೆಯ ಆಡಳಿತ ಸೌಧದ ಮುಂಬಾಗದಲ್ಲಿ ಮುಲ್ಕಿ- ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.      ಸಂಜೆ 5.40ಕ್ಕೆ ಮೂಡಬಿದಿರೆಯಿಂದ ರಸ್ತೆ ಮಾರ್ಗವಾಗಿ ನಿರ್ಗಮಿಸಿ, ಬಜಪೆಯಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 6.50ಕ್ಕೆ ವಿಮಾನದ ಮೂಲಕ ಹೊರಟು, ರಾತ್ರಿ 7.45ಕ್ಕೆ ಬೆಂಗಳೂರು ತಲುಪಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement

ರಾಜ್ಯದ ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ವಿ.ಸೋಮಣ್ಣ ಅವರು ಏ.27 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅವರು ಏ.27ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೊರಟು 11.20ಕ್ಕೆ ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ಅವರು ಮಧ್ಯಾಹ್ನ 12 ಗಂಟೆಗೆ ಮೂಡಬಿದರೆಗೆ ಆಗಮಿಸಿ, ಪಕ್ಷದ ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮುಲ್ಕಿ-ಮೂಡಬಿದಿರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಮೂಡಬಿದಿರೆ ತಾಲೂಕು ಆಡಳಿತ ಸೌಧದ ಉದ್ಘಾಟನೆ ಹಾಗೂ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5.30ಕ್ಕೆ ಮೂಡಬಿದಿರೆಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ 6.50ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅವರು ಏ. 27ರ ಬುಧವಾರ ಬೆಳಿಗ್ಗೆ 10.30ಕ್ಕೆ ಕಾರ್ಕಳದಿಂದ ಮಂಗಳೂರಿಗೆ ಆಗಮಿಸಿ, ಬೆಳಿಗ್ಗೆ 11.20 ರಿಂದ ಸಂಜೆ  6 ಗಂಟೆಯ ವರೆಗೆ ಮುಖ್ಯಮಂತ್ರಿ ಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಪ್ರವಾಸ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.   ಸಂಜೆ 6.50ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಿವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

ಮಂಗಳೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಂಪನಕಟ್ಟೆಯಲ್ಲಿ 2020-21 ಸಾಲಿನಲ್ಲಿ ಮಂಜೂರಾದ   ನೂತನ ಕಾಲೇಜು ಕಟ್ಟಡದ ಶಂಕುಸ್ಥಾಪನಾ ಸಮಾರಂಭವು ಏ.27ರ ಬುಧವಾರ ಬೆಳಿಗ್ಗೆ11 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ.ನಾಗೇಶ್ ಶಂಕುಸ್ಥಾಪನೆ ನೆರವೇರಿಸುವರು.

ಕಂದಾಯ ಸಚಿವರಾದ ಆರ್.ಅಶೋಕ್ ಅವರು ಏ. 27ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಏ. 27ರ ಬುಧವಾರ ಸಂಜೆ 5ಗಂಟೆಗೆ ಹಾಸನದಿಂದ ಹೊರಟು 6.30ಕ್ಕೆ   ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆಯುವ 5ಠನೇ ವರ್ಷದ ಸಾಮೂಹಿಕ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 7.45ಕ್ಕೆ ಧರ್ಮಸ್ಥಳದಿಂದ ಹೊರಟು ರಾತ್ರಿ 10 ಗಂಟೆಗೆ ಚಿಕ್ಕಮಗಳೂರು ತಲುಪಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಎ.27 | ದ ಕ ಜಿಲ್ಲೆಯಲ್ಲಿ ಮುಖ್ಯಮಂತ್ರಿ – ಸಚಿವರ ತಂಡವೇ ಪ್ರವಾಸ…! |"

Leave a comment

Your email address will not be published.


*