ಕೃಷಿ ಪತ್ತಿನ ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರ ಸಂಕಷ್ಟ ಕಾಲದಲ್ಲಿ ಕೈ ಹಿಡಿದಿವೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ.ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ತಿನ ಸಹಕಾರಿ ವ್ಯವಸ್ಥೆ ಇಲ್ಲದೆ ಹೋದರೆ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಗುರಿಯಾಗುತ್ತಿದ್ದರು. ಇಂದು ಸಹಕಾರಿ ಕ್ಷೇತ್ರ ರೈತರಿಗೆ ಆರ್ಥಿಕ ಊರುಗೋಲಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ.ಈಗಾಗಲೇ ರಾಜ್ಯದಲ್ಲಿ ಸಹಕಾರ ಕ್ಷೇತ್ರ ಪ್ರಗತಿಯತ್ತ ಸಾಗುತ್ತಿದ್ದು, ಇನ್ನಷ್ಟು ಅಭಿವೃದ್ಧಿಪಡಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel