ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |

April 25, 2024
2:00 PM
ದ ಕ ಜಿಲ್ಲೆಯ ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮಂಗಳೂರು ಬಿಜೆಪಿ ಅಭ್ಯರ್ಥಿ ಹೇಳಿದ್ದಾರೆ.

ಚುನಾವಣೆಯ ದಿನ ಸಮೀಪಿಸಿದೆ. ಈ ನಡುವೆ ಕರಾವಳಿ ಜಿಲ್ಲೆಯ ಅಭಿವೃದ್ಧಿಯ ಕನಸುಗಳನ್ನು ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ತೆರೆದಿರಿಸಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ.

ಕರಾವಳಿ ಜಿಲ್ಲೆಯು ಇಡೀ ರಾಜ್ಯದ ಪ್ರಮುಖ ಆರ್ಥಿಕ ಚಟುವಟಿಕೆಯ ಕೇಂದ್ರ. ಕರಾವಳಿ ಮೂಲಕ ಆಮದು ರಫ್ತು ವಹಿವಾಟು ಸಹಿತ ಹಲವು ಉದ್ದಿಮೆಗಳಿಗೆ ಕರಾವಳಿ ಜಿಲ್ಲೆಯೇ ಪ್ರಮುಖವಾದ ಆಧಾರವಾಗಿದೆ. ಈ ನಡುವೆ ಈ ಜಿಲ್ಲೆಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿಕೊಂಡರೆ, ವಿಶೇಷವಾಗಿ ಕೃಷಿಯನ್ನೇ ಅವಲಂಬಿಸಿಕೊಂಡಿರುವ ಕರಾವಳಿ ಜಿಲ್ಲೆಯ ಕೃಷಿ ಅಭಿವೃದ್ಧಿಗೂ ಪ್ರಯತ್ನ ಮಾಡುವುದಾಗಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ತಮ್ಮ ನವಯುಗ-ನವಪಥದಲ್ಲಿ  ಹೇಳಿದ್ದಾರೆ.

ಕೃಷಿಕರಿಗೆ ಸುಸ್ಥಿರಾಭಿವೃದ್ಧಿ ಮತ್ತು ತಾಂತ್ರಿಕ ಸಹಕಾರ, ಸಹಜ ಕೃಷಿ ಪದ್ಧತಿ ಬಳಕೆಗೆ ಉತ್ತೇಜನ, ದೇಶಿ ಜಾನುವಾರು ತಳಿಗಳ ರಕ್ಷಣೆ, ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ್ದು,  ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಮೀನುಗಾರಿಕೆ ಕಾಲೇಜನ್ನು ವಿಶ್ವವಿದ್ಯಾಲಯವಾಗಿ ಉನ್ನತೀಕರಿಸುವ ಪ್ರಯತ್ನದ ಬಗ್ಗೆಯೂ ಹೇಳಿದ್ದಾರೆ.  ಮತ್ಸ್ಯೋದ್ಯಮದ ಅಭಿವೃದ್ಧಿಯ ಮೂಲಕ ನೀಲಿ ಕ್ರಾಂತಿಗೆ ಕೊಡುಗೆ ನೀಡಲು ಮೀನುಗಾರರಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದಾರೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ
March 17, 2025
6:36 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror