ಚುನಾವಣೆಯ ದಿನ ಸಮೀಪಿಸಿದೆ. ಈ ನಡುವೆ ಕರಾವಳಿ ಜಿಲ್ಲೆಯ ಅಭಿವೃದ್ಧಿಯ ಕನಸುಗಳನ್ನು ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತೆರೆದಿರಿಸಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ.
ಕರಾವಳಿ ಜಿಲ್ಲೆಯು ಇಡೀ ರಾಜ್ಯದ ಪ್ರಮುಖ ಆರ್ಥಿಕ ಚಟುವಟಿಕೆಯ ಕೇಂದ್ರ. ಕರಾವಳಿ ಮೂಲಕ ಆಮದು ರಫ್ತು ವಹಿವಾಟು ಸಹಿತ ಹಲವು ಉದ್ದಿಮೆಗಳಿಗೆ ಕರಾವಳಿ ಜಿಲ್ಲೆಯೇ ಪ್ರಮುಖವಾದ ಆಧಾರವಾಗಿದೆ. ಈ ನಡುವೆ ಈ ಜಿಲ್ಲೆಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿಕೊಂಡರೆ, ವಿಶೇಷವಾಗಿ ಕೃಷಿಯನ್ನೇ ಅವಲಂಬಿಸಿಕೊಂಡಿರುವ ಕರಾವಳಿ ಜಿಲ್ಲೆಯ ಕೃಷಿ ಅಭಿವೃದ್ಧಿಗೂ ಪ್ರಯತ್ನ ಮಾಡುವುದಾಗಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ನವಯುಗ-ನವಪಥದಲ್ಲಿ ಹೇಳಿದ್ದಾರೆ.
ಕೃಷಿಕರಿಗೆ ಸುಸ್ಥಿರಾಭಿವೃದ್ಧಿ ಮತ್ತು ತಾಂತ್ರಿಕ ಸಹಕಾರ, ಸಹಜ ಕೃಷಿ ಪದ್ಧತಿ ಬಳಕೆಗೆ ಉತ್ತೇಜನ, ದೇಶಿ ಜಾನುವಾರು ತಳಿಗಳ ರಕ್ಷಣೆ, ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದ್ದು, ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಮೀನುಗಾರಿಕೆ ಕಾಲೇಜನ್ನು ವಿಶ್ವವಿದ್ಯಾಲಯವಾಗಿ ಉನ್ನತೀಕರಿಸುವ ಪ್ರಯತ್ನದ ಬಗ್ಗೆಯೂ ಹೇಳಿದ್ದಾರೆ. ಮತ್ಸ್ಯೋದ್ಯಮದ ಅಭಿವೃದ್ಧಿಯ ಮೂಲಕ ನೀಲಿ ಕ್ರಾಂತಿಗೆ ಕೊಡುಗೆ ನೀಡಲು ಮೀನುಗಾರರಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದಾರೆ.
ಅಕ್ರಮವಾಗಿ ಸುಮಾರು 68 ಟನ್ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…
ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…