Advertisement
MIRROR FOCUS

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

Share

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು ಜನಪ್ರತಿನಿಧಿಗಳು ಒತ್ತಾಯಿಸಿದ್ದಾರೆ.

ಗುರುವಾರ ಸ್ಪೀಕರ್ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾ ಸೌಧ’ದಲ್ಲಿ ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಚಿವರು, ಶಾಸಕರು ಭಾಗವಹಿಸಿ, ಕರಾವಳಿಯ ಅಭಿವೃದ್ಧಿಯನ್ನು ಸಮಗ್ರವಾಗಿ ಪರಿಗಣಿಸಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ಮನವಿ ಮಾಡಿದರು.

ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ಕಡಲಕೊರೆತ ನಿಯಂತ್ರಣಕ್ಕೆ ತೀರ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ಎತ್ತರದಲ್ಲಿ ನಿರ್ಮಿಸಿದರೆ, ಕೊರೆತ ತಡೆಯುವುದರೊಂದಿಗೆ ಸಂಚಾರ ವ್ಯವಸ್ಥೆಯೂ ಸುಧಾರಿಸಲಿದೆ ಎಂದರು. ಇದು ಪ್ರವಾಸೋದ್ಯಮ ಕ್ಷೇತ್ರಕ್ಕೂ ಉತ್ತೇಜನ ನೀಡಲಿದೆ ಎಂದು ಅಭಿಪ್ರಾಯಪಟ್ಟರು. ಪಶ್ಚಿಮ ವಾಹಿನಿ ಯೋಜನೆಗೆ ಹೆಚ್ಚುವರಿ ಅನುದಾನ ಅಗತ್ಯವಿದೆ. ಉಳ್ಳಾಲ ಕೋಟೆಪುರ ಜೆಟ್ಟಿ ನಿರ್ಮಾಣದಿಂದ ಮಂಗಳೂರು ಬಂದರಿನ ಮೇಲೆ ಒತ್ತಡ ಕಡಿಮೆಯಾಗಲಿದೆ ಎಂದರು.

ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ಎಸ್. ವೈದ್ಯ ಮಾತನಾಡಿ, ಕರಾವಳಿಯ ಮೂರು ಜಿಲ್ಲೆಗಳ 13 ಮೀನುಗಾರಿಕೆ ಬಂದರುಗಳಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ಹೂಳೆತ್ತಲು ನಿರ್ಧರಿಸಲಾಗಿದೆ ಎಂದರು. ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಿದ್ದು, ಅನುದಾನ ಸಿಗುವ ನಿರೀಕ್ಷೆ ಇದೆ ಎಂದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಕಡೆ ಮೀನು ಮಾರುಕಟ್ಟೆ ನಿರ್ಮಾಣ ಕೈಗೆತ್ತಿಕೊಳ್ಳಬೇಕು ಎಂದು ಹೇಳಿದರು.

ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಕಡಲಕೊರೆತಕ್ಕೆ ಶಾಶ್ವತ ಪರಿಹಾರ ಒದಗಿಸಲು ಒತ್ತು ನೀಡಬೇಕು ಎಂದರು. ಪ್ರವಾಸೋದ್ಯಮ ಉತ್ತೇಜನಕ್ಕೆ ವಾಟರ್ ಮೆಟ್ರೋ ಯೋಜನೆ ಜಾರಿಗೆ ತರಬೇಕು ಎಂದು ಸೂಚಿಸಿದರು.

ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಕರಾವಳಿ ನಿಯಂತ್ರಣ ವಲಯ (ಸಿಆರ್‍ಝಡ್) ಕಚೇರಿಯನ್ನು ಬೆಂಗಳೂರಿನಿಂದ ಮಂಗಳೂರು ಅಥವಾ ಉಡುಪಿಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು. ಬ್ರಹ್ಮಾವರ ಕೃಷಿ ವಿಜ್ಞಾನ ಕಾಲೇಜನ್ನು ಕೃಷಿ ವಿಶ್ವವಿದ್ಯಾನಿಲಯವಾಗಿ ಮೇಲ್ದರ್ಜೆಗೇರಿಸಬಹುದಾಗಿದೆ ಎಂದರು.

ಉಡುಪಿ ಶಾಸಕ ಯಶಪಾಲ್ ಸುವರ್ಣ ಮೀನುಗಾರಿಕೆ ಮತ್ತು ಬಂದರು ಇಲಾಖೆಗಳ ವಿಲೀನದಿಂದ ಅಭಿವೃದ್ಧಿ ವೇಗವಾಗಲಿದೆ ಎಂದರು. ಡ್ರೆಜ್ಜಿಂಗ್ ಗುತ್ತಿಗೆ ಪ್ರಕ್ರಿಯೆ ವಿಳಂಬವಾಗುತ್ತಿರುವುದರಿಂದ ಸರ್ಕಾರವೇ ಯಂತ್ರ ಖರೀದಿಸಬೇಕು ಎಂದು ಸಲಹೆ ನೀಡಿದರು. ಪಶ್ಚಿಮ ಕರಾವಳಿಯಲ್ಲಿ ಸಮಾನ ಮೀನುಗಾರಿಕಾ ನೀತಿ ಜಾರಿಯಾಗಬೇಕು ಎಂದು ಒತ್ತಾಯಿಸಿದರು.

ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಕ್ಯಾನ್ಸರ್ ಮತ್ತು ಹೃದ್ರೋಗ ಚಿಕಿತ್ಸೆಗೆ ಉನ್ನತ ಸರಕಾರಿ ಆಸ್ಪತ್ರೆ ಕರಾವಳಿಯಲ್ಲಿ ಅಗತ್ಯವಿದೆ ಎಂದರು. ವಿದ್ಯಾರ್ಥಿಗಳ ಸಂಖ್ಯೆಯ ಹೆಚ್ಚಳ ಹಿನ್ನೆಲೆಯಲ್ಲಿ ಹಾಸ್ಟೆಲ್ ಸೌಲಭ್ಯ ಹೆಚ್ಚಿಸಬೇಕೆಂದು ಹೇಳಿದರು.

ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ರಾಜಾಕಾಲುವೆ ಡ್ರೆಜ್ಜಿಂಗ್ ಆಗದ ಕಾರಣ ಮಳೆಗಾಲದಲ್ಲಿ ನೆರೆ ಉಂಟಾಗುತ್ತಿದೆ ಎಂದು ಹೇಳಿದರು. ಇದಕ್ಕೆ ಶಾಶ್ವತ ಪರಿಹಾರ ಅಗತ್ಯವಿದೆ ಎಂದರು.

ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ :  ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿದರು. ರಬ್ಬರ್ ಬೆಳೆಗೆ ನಿರ್ದಿಷ್ಟ ಸ್ಥಾನಮಾನ ನೀಡಬೇಕು. ಕಡಬ ತಾಲೂಕಿನಲ್ಲಿ ಇನ್ನೂ ಇಲಾಖೆಗಳು ಸ್ಥಾಪನೆಯಾಗಿಲ್ಲ, ಸಾರ್ವಜನಿಕರಿಗೆ ಪುತ್ತೂರಿಗೆ ತೆರಳಬೇಕಾಗಿದೆ ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಭೆಯ ಅಂಶಗಳನ್ನು ಕ್ರಿಯಾಯೋಜನೆಯಲ್ಲಿ ಸೇರಿಸಿ ಸರ್ಕಾರಕ್ಕೆ ಅನುದಾನ ಬೇಡಿಕೆ ಸಲ್ಲಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಕಾರ್ಯದರ್ಶಿ ಪ್ರದೀಪ್ ಡಿಸೋಜ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

24 minutes ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

50 minutes ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago