Advertisement
MIRROR FOCUS

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

Share

ಉಳ್ಳಾಲ–ಸೋಮೇಶ್ವರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತದ ಸಮಸ್ಯೆ ಕುರಿತು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಲೋಕಸಭೆಯಲ್ಲಿ ಗಂಭೀರವಾಗಿ ಧ್ವನಿಯೆತ್ತಿದ್ದಾರೆ.

ಲೋಕಸಭೆಯ ನಿಯಮ 377ರಡಿ ಈ ವಿಷಯವನ್ನು ಪ್ರಸ್ತಾಪಿಸಿದ ಅವರು, ಕರಾವಳಿ ತೀರದ ಸಂರಕ್ಷಣೆಗೆ ತುರ್ತಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕರಾವಳಿಯ ಅರ್ಧ ಭಾಗ ಕೊರೆತಕ್ಕೆ ಒಳಪಡುವ ಆತಂಕ :  ಸಂಸದರು ನೀಡಿದ ಮಾಹಿತಿಯ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 36.66 ಕಿ.ಮೀ. ಕರಾವಳಿ ತೀರದ ಪೈಕಿ ಸುಮಾರು 17.74 ಕಿ.ಮೀ. (ಶೇ.48.40) ಭಾಗವು ಕಡಲ್ಕೊರೆತಕ್ಕೆ ಒಳಗಾಗಿದೆ. ಇದು ಕರ್ನಾಟಕ ರಾಜ್ಯದ ಸರಾಸರಿ ಶೇ.24 ಕ್ಕಿಂತ, ರಾಷ್ಟ್ರೀಯ ಸರಾಸರಿ ಶೇ.33.6 ಕ್ಕಿಂತಲೂ ಗಣನೀಯವಾಗಿ ಹೆಚ್ಚಾಗಿದೆ.

ಇದರಿಂದಾಗಿ ಜಿಲ್ಲೆಯ ಕೇವಲ ಶೇ.21.9 ರಷ್ಟು ಕರಾವಳಿ ಮಾತ್ರ ಸದ್ಯಕ್ಕೆ ಸುರಕ್ಷಿತವಾಗಿದೆ, ಇದು ನೆರೆಯ ಜಿಲ್ಲೆಗಳಿಗಿಂತಲೂ ಕಡಿಮೆ ಪ್ರಮಾಣ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಹವಾಮಾನ ವೈಪರೀತ್ಯ, ಅಲೆಗಳ ಅಬ್ಬರದಿಂದ ಹೆಚ್ಚುತ್ತಿರುವ ಹಾನಿ : ಮುಂಗಾರು ಸಮಯದಲ್ಲಿ ಉಂಟಾಗುವ ಅಲೆಗಳ ಅಬ್ಬರ, ಬದಲಾಗುತ್ತಿರುವ ಹವಾಮಾನ ವೈಪರೀತ್ಯ ಹಾಗೂ ಕರಾವಳಿಯಲ್ಲಿನ ಕೆಲವು ಅವೈಜ್ಞಾನಿಕ ಕಾಮಗಾರಿಗಳಿಂದಾಗಿ ಕಡಲ ತೀರವು ನಿರಂತರವಾಗಿ ಸವಕಳಿಗೆ ಒಳಗಾಗುತ್ತಿದೆ. ಈ ಕಾರಣದಿಂದ  ಮನೆಗಳು,  ರಸ್ತೆಗಳು,  ಸಾರ್ವಜನಿಕ ಆಸ್ತಿಪಾಸ್ತಿಗಳು ಹಾನಿಗೊಳಗಾಗುತ್ತಿದ್ದು, ಕರಾವಳಿ ಪ್ರದೇಶದ ಭೂಪ್ರದೇಶವೇ ಸಮುದ್ರಪಾಲಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಸದ ಚೌಟ ಅವರ ಪ್ರಕಾರ, ಇದು ಕೇವಲ ಭೌಗೋಳಿಕ ಸಮಸ್ಯೆಯಲ್ಲ; ಸಮುದ್ರವನ್ನೇ ನಂಬಿ ಬದುಕುತ್ತಿರುವ ಮೀನುಗಾರ ಸಮುದಾಯದ ಜೀವನೋಪಾಯಕ್ಕೆ ಎದುರಾಗಿರುವ ದೊಡ್ಡ ಅಪಾಯವಾಗಿದೆ.

ಮುಂಗಾರಿಗೂ ಮೊದಲು ತುರ್ತು ಕ್ರಮ ಅಗತ್ಯ : ಪ್ರತಿ ವರ್ಷವೂ ತೀವ್ರ ಸ್ವರೂಪದ ಕಡಲ್ಕೊರೆತ ಎದುರಿಸುತ್ತಿರುವ ದಕ್ಷಿಣ ಕನ್ನಡಕ್ಕೆ ಈ ಬಾರಿ ಮುಂಗಾರು ಪ್ರವೇಶ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತುರ್ತಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಅವರು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಭೂ ವಿಜ್ಞಾನ ಸಚಿವಾಲಯ ಇವುಗಳ ಪರಸ್ಪರ ಸಮನ್ವಯದೊಂದಿಗೆ ಜಿಲ್ಲೆಗೆ ವಿಶೇಷ ಕರಾವಳಿ ಸಂರಕ್ಷಣಾ ಯೋಜನೆ ರೂಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಶಾಶ್ವತ ಪರಿಹಾರಕ್ಕೆ ಹಣಕಾಸು ನೆರವು ಬಿಡುಗಡೆ ಆಗಲಿ : ಕರಾವಳಿ ಸಂರಕ್ಷಣೆಗೆ ಮೀಸಲಾಗಿರುವ ಹಣಕಾಸಿನ ನೆರವನ್ನು ತಕ್ಷಣ ಬಿಡುಗಡೆ ಮಾಡಬೇಕು.  ಅದರ ಮೂಲಕ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕೈಗೊಳ್ಳುವ ಜೊತೆಗೆ ಮೀನುಗಾರರ ಬದುಕನ್ನು ಸುರಕ್ಷಿತಗೊಳಿಸಬೇಕು ಎಂದು ಸಂಸದರು ಸದನದಲ್ಲಿ ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರವು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹಾರಕ್ಕೆ ಕಾರ್ಯೋನ್ಮುಖವಾಗಬೇಕು ಎಂಬುದು ಅವರ ಮುಖ್ಯ ಬೇಡಿಕೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

5 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

5 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

16 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

21 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

22 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

22 hours ago