MIRROR FOCUS

ಅಡಿಕೆ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಗಮನಸೆಳೆದ ಕರಾವಳಿಯ ಶಾಸಕರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ಕರಾವಳಿ ಜಿಲ್ಲೆಯ ಮೂವರು ಶಾಸಕರು ಅಧಿವೇಶನದಲ್ಲಿ ಧ್ವನಿ ಎತ್ತಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಅಡಿಕೆ ಹಳದಿ ಎಲೆರೋಗದ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದಾರೆ.

Advertisement

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ‌ ಅವರು ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ  ಮಾತನಾಡಿ,  ದ ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಅಡಿಕೆಯೇ ಪ್ರಧಾನ ಬೆಳೆಯಾಗಿದೆ. ದ ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಈಗಾಗಲೇ ಹಳದಿ ಎಲೆ ರೋಗ ಕಾಣಿಸಿಕೊಂಡಿದ್ದು ಸುಮಾರು 10 ಗ್ರಾಮಗಳಲ್ಲಿ ಈ ರೋಗ ಕಾಣಿಸಿಕೊಂಡಿದ್ದು ಕೃಷಿಕರು ಆತಂಕದಲ್ಲಿದ್ದು ಇದುವರೆಗೂ ಇವರಿಗೆ ಯಾವುದೇ ಪರಿಹಾರವಾಗಲಿ, ರೋಗಕ್ಕೆ ಸೂಕ್ತ ಔಷಧಿಯಾಗಲಿ ದೊರೆಯದೇ ಇರುವುದರಿಂದ ಈ ಭಾಗದ ಕೃಷಿಕರು ಆರ್ಥಿಕವಾಗಿ ನಷ್ಟವನ್ನು ಅನುಭವಿಸುವಂತಾಗಿದ್ದು ಇವರಿಗೆ ಪರಿಹಾರ ಕೊಡಬೇಕು ಎಂದು ಸರಕಾರವನ್ನು ಆಗ್ರಹಿಸಿದ್ದಾರೆ.

ಸುಳ್ಯ ತಾಲೂಕಿನ 37,317 ಹೆಕ್ಟೇರ್ ಭೂಮಿಯಲ್ಲಿ 11,449 ಹೆಕ್ಟೇರ್ ಭೂಮಿಯಲ್ಲಿ ಕೃಷಿ ಇದೆ ಇದರಲ್ಲಿ 511 ಹೆಕ್ಟೇರ್ ಭೂಮಿಯಲ್ಲಿ ಅಡಿಕೆ ಕೃಷಿಯನ್ನು ಮಾಡುತ್ತಿದ್ದಾರೆ. ಈ ಪ್ರದೇಶದ ಜನತೆಯ ಮುಖ್ಯ ಬೆಳೆ ಮತ್ತು ಜೀವನಕ್ಕೆ ಆಧಾರವಾಗಿಸಿಕೊಂಡ ಕೃಷಿಗೆ ರೋಗ ಬಾಧಿಸಿದೆ, ಒಟ್ಟು 5588 ಅಡಿಕೆ ಕೃಷಿಕರು ಈ ಭಾಗದಲ್ಲಿದ್ದು ಹಳದಿ ಎಲೆ ರೋಗದಿಂದ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದು ಇದುವರೆಗೂ ಇವರಿಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಸರಕಾರ ಈ ಬಗ್ಗೆ ತಕ್ಷಣ ಕ್ರಮಕೈಗೊಂಡು ಅಡಿಕೆ ಬೆಳೆಗಾರರಿಗೆ ಪರಿಹಾರವನ್ನು ಕೊಡಬೇಕು ಎಂದು ಅಶೋಕ್‌ ಕುಮಾರ್‌ ರೈ ಒತ್ತಾಯಿಸಿದರು. ಇದೇ ವೇಳೆ ಅಡಿಕೆ ಆಮದು ತಡೆಗೆ ಕ್ರಮ ಕೈಗೊಳ್ಳಬೇಕು ಎಂದೂ ಒತ್ತಾಯಿಸಿದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು, ಅಡಿಕೆ ಹಳದಿ ಎಲೆರೋಗದಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದ ಸರ್ಕಾರವು ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ತೋಟಗಾರಿಕಾ ಸಚಿವರು, ಹಳದಿ ಎಲೆರೋಗ ಸಂಶೋಧನೆಗೆ 50 ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ.ಪರ್ಯಾಯ ಬೆಳೆ ಬೆಳೆಸುವುದಕ್ಕೂ ನೆರವು ನೀಡಲಾಗುತ್ತಿದೆ ಎಂದರು.

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರು, ದಕ್ಷಿಣ ಕನ್ನಡ ಮತ್ತು ಕರಾವಳಿ ಭಾಗದ ಬಹುಮುಖ್ಯ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆ ಚುಕ್ಕಿ ರೋಗ ಹಳದಿ ರೋಗ ಮುಂತಾದ ರೋಗಗಳಿಗೆ ವೈಜ್ಞಾನಿಕವಾಗಿ ಪರಿಹಾರವನ್ನು ಕಂಡುಕೊಂಡು ನಷ್ಟವನ್ನು ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರವನ್ನು ಒದಗಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

Coastal MLAs Ashok Kumar Rai, Bhagirathi Murulya, Harish Poonja spoke in the session about the problem of Arecanut growers in Dakshina Kannada district. demanded that,  the government should take action regarding the problem of Arecanut farmers and its solution.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

8 hours ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

10 hours ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

24 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

1 day ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago