Advertisement
ವೆದರ್ ಮಿರರ್

ಹವಾಮಾನ ವರದಿ | 19-07-2025 |ಕರಾವಳಿಯ ಹವಾಮಾನವು ಕೃಷಿಕರಿಗೆ ಆತಂಕ..! | ಕೊಡಗು ಹಾಗೂ ಕೇರಳದಲ್ಲಿ ಭಾರಿ ಮಳೆಗೆ ಕಾರಣವೇನು..?

Share

20.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಮಳೆ ಜಾಸ್ತಿಯೇ ಇರಬಹುದು. ಈಗಿನಂತೆ ಜುಲೈ 21ರ ತನಕ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ನಂತರ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ತೋಟಗಳಿಗೆ ಔಷಧಿ ಸಿಂಪಡಿಸಲು ಜುಲೈ ಕೊನೆಯ ತನಕವೂ ಅವಕಾಶ ಸಿಗುವುದು ಕಡಿಮೆ ಇರಬಹುದು.

ಮಲೆನಾಡು : ಕೊಡಗು(ಭಾರಿ ಮಳೆಯ ಮುನ್ಸೂಚನೆ ಇದೆ), ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜುಲೈ 21ರ ತನಕ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆದರೂ ಜುಲೈ ಕೊನೆಯ ತನಕವೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುಂದುವರಿಯುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿಯ ಒಂದೆರಡು ಕಡೆ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆಯ ಒಂದೆರಡು ಕಡೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಈಗಿನಂತೆ ಜುಲೈ 26ರ ತನಕವೂ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಮಧ್ಯಮ ಸ್ತರದ ಗಾಳಿ ಹಾಗೂ ಮೋಡಗಳು ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಕಾರಣದಿಂದ ಒಳನಾಡು ಭಾಗಗಳಲ್ಲಿ ಮಳೆಯಾಗುತ್ತಿದ್ದು , ಈ ಗಾಳಿಯು ಮಲೆನಾಡು ಭಾಗಗಳಲ್ಲಿ ಮುಂಗಾರು ಮಾರುತದ ಪ್ರಭಾವಕ್ಕೊಳಗಾಗಿ ಕೊಡಗು , ಕೇರಳ, ತಮಿಳುನಾಡು ಮೂಲಕ ಬಂಗಾಳಕೊಲ್ಲಿಗೆ ಪ್ರವೇಶಿಸುತ್ತಿವೆ. ಈ ಕಾರಣದಿಂದ ಕೊಡಗು ಹಾಗೂ ಕೇರಳದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

4 minutes ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

15 minutes ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

24 minutes ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

30 minutes ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

16 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

20 hours ago