ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದಲ್ಲಿ ತೆಂಗು ಮತ್ತು ಕೊಬ್ಬರಿ ಬೆಲೆ ಏರಿಕೆ ಕಂಡಿದ್ದು, ರೈತರಿಗೆ ಅನುಕೂಲವಾಗಿದೆ. ಹೊರ ದೇಶದಿಂದ ಆಮದು ಮಾಡಿಕೊಳ್ಳುವ ತೆಂಗಿನ ಉಪ ಉತ್ಪನ್ನಗಳ ಸುಂಕ ಹೆಚ್ಚಳದಿಂದ ದೇಶದ ತೆಂಗು ಬೆಳೆಗಾರರಿಗೆ ನೆರವಾಗಿದೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಕೊಬ್ಬರಿ ಬೆಲೆ ಏರಿಕೆಯಾಗಿದ್ದು ಚಾಮರಾಜನಗರ ಜಿಲ್ಲೆಯ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರವು ಕೊಬ್ಬರಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಿರುವುದು ರೈತರಿಗೆ ವರದಾನವಾಗಿದೆ. ಜಾಗತಿಕ ತಾಪಮಾನದಿಂದ ಎಳನೀರಿನ ಸೇವನೆ ಹೆಚ್ಚಾಗಿರುವುದರಿಂದ ತೆಂಗಿನ ಕಾಯಿಯ ಬೆಲೆ ಏರಿಕೆಯಾಗಿದೆ. ಈ ನಡುವೆ ಕೇಂದ್ರ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ತೆಂಗಿನ ಕಾಯಿ ಹಾಗೂ ಕೊಬ್ಬರಿ ಬೆಲೆ ಖರೀದಿ ಮಾಡುವುದು ಸದ್ಯ ಧಾರಣೆ ಏರಿಕೆ ಹಾಗೂ ಸ್ಥಿರತೆಗೆ ಕಾರಣವಾಗಿದೆ, ರೈತರಿಗೆ ಆರ್ಥಿಕವಾಗಿ ಸಹಾಯವಾಗಿದೆ ಎಂದು ರೈತ ದುಗ್ಗಹಟ್ಟಿ ರಾಜೇಶ್ ಹಾಗೂ ಮಹೇಶ್ ಹೇಳುತ್ತಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…