ರಾಜ್ಯದಲ್ಲಿ ಒಟ್ಟು ಏಳು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ 12 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ನಲ್ಲಿ ತೆಂಗಿನ ಕೃಷಿ ಮಾಡಲಾಗುತ್ತಿದೆ. ಆದರೆ ಜಿಲ್ಲೆಯ ಕೃಷಿಕರಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಹೀಗಾಗಿ ತೆಂಗು ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ, ಇತರ ರಾಜ್ಯಗಳಿಗೆ ಸರಬರಾಜು ಮಾಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು.
ಅವರು ಚಾಮರಾಜನಗರದಲ್ಲಿ ಆಯೋಜಿಸಿದ್ದ ವಿಶ್ವ ತೆಂಗು ದಿನಾಚರಣೆಯನ್ನು ಉದ್ಘಾಟಿಸಿದರು. ಚಾಮರಾಜನಗರ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು ತೋಟಗಾರಿಕೆ ಬೆಳೆಗಳು ಮತ್ತು ಹೂವು-ಹಣ್ಣುಗಳು ಪ್ರಧಾನ ಕೃಷಿ ಉತ್ಪನ್ನಗಳಾಗಿವೆ. ಆದರೆ ತೆಂಗು ಕೃಷಿಕರಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಹೀಗಾಗಿ ತೆಂಗು ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ, ಇತರ ರಾಜ್ಯಗಳಿಗೆ ಸರಬರಾಜು ಮಾಡಬೇಕು ಎಂದು ಸಲಹೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ತೆಂಗು ಸಂಸ್ಕರಣೆ ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷ ಎ.ಎಂ.ಮಹೇಶ್ ಮಾತನಾಡಿ ತೆಂಗು ಎಲ್ಲಾ ರೀತಿಯಲ್ಲೂ ಆರೋಗ್ಯದಾಯಕ ಉತ್ಪನ್ನವಾಗಿದೆ ಎಂದು ವೈದ್ಯರು ಶಿಫಾರಸು ಮಾಡುತ್ತಿದ್ದಾರೆ. ಹೀಗಾಗಿ ರೈತರು, ಎಳನೀರು, ಕೊಬ್ಬರಿ, ಎಣ್ಣೆ ಇತ್ಯಾದಿ ಮೌಲ್ಯ ವರ್ಧಿತ ಪದಾರ್ಥಗಳ ತಯಾರಿಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು. ಎಳನೀರು ಇತರೆ ತಂಪು ಪಾನೀಯಗಳ ಜತೆಗೆ ಸ್ಪರ್ಧಿಸಿ ಮಾರುಕಟ್ಟೆಯಲ್ಲಿ ಉಳಿಯಬೇಕಿದೆ. ಹೀಗಾಗಿ ಇದರ ಉಪ ಉತ್ಪನ್ನಗಳ ತಯಾರಿಕೆಗೂ ರೈತರು ಆದ್ಯತೆ ನೀಡಬೇಕು ಎಂದು ಹೇಳಿದರು.
ಈ ವೇಳೆ ವಿವಿಧ ತೆಂಗಿನ ತಳಿಗಳನ್ನು ಪ್ರದರ್ಶಿಸಲಾಯಿತು.ಕೃಷಿ ಇಲಾಖೆಯ ಅಧಿಕಾರಿಗಳು ತೆಂಗು ಬೆಳೆಗೆ ತಗಲುವ ರೋಗ ಬಾಧೆ ಮತ್ತು ಪರಿಹಾರ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.


