Advertisement
MIRROR FOCUS

ರಾಜ್ಯದಲ್ಲಿ 7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೆಂಗು | ತೆಂಗು ಮೌಲ್ಯವರ್ಧನೆಗೆ ಸಲಹೆ

Share

ರಾಜ್ಯದಲ್ಲಿ ಒಟ್ಟು ಏಳು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ 12 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ನಲ್ಲಿ ತೆಂಗಿನ ಕೃಷಿ ಮಾಡಲಾಗುತ್ತಿದೆ. ಆದರೆ ಜಿಲ್ಲೆಯ ಕೃಷಿಕರಿಗೆ ಸೂಕ್ತ  ಬೆಲೆ ಸಿಗುತ್ತಿಲ್ಲ. ಹೀಗಾಗಿ ತೆಂಗು ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ, ಇತರ ರಾಜ್ಯಗಳಿಗೆ ಸರಬರಾಜು ಮಾಡಬೇಕು ಎಂದು ಚಾಮರಾಜನಗರ  ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು.

ಅವರು ಚಾಮರಾಜನಗರದಲ್ಲಿ ಆಯೋಜಿಸಿದ್ದ ವಿಶ್ವ ತೆಂಗು ದಿನಾಚರಣೆಯನ್ನು ಉದ್ಘಾಟಿಸಿದರು. ಚಾಮರಾಜನಗರ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು ತೋಟಗಾರಿಕೆ ಬೆಳೆಗಳು ಮತ್ತು ಹೂವು-ಹಣ್ಣುಗಳು ಪ್ರಧಾನ ಕೃಷಿ  ಉತ್ಪನ್ನಗಳಾಗಿವೆ. ಆದರೆ ತೆಂಗು ಕೃಷಿಕರಿಗೆ ಸೂಕ್ತ  ಬೆಲೆ ಸಿಗುತ್ತಿಲ್ಲ. ಹೀಗಾಗಿ ತೆಂಗು ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ, ಇತರ ರಾಜ್ಯಗಳಿಗೆ ಸರಬರಾಜು ಮಾಡಬೇಕು ಎಂದು ಸಲಹೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

ತೆಂಗು ಸಂಸ್ಕರಣೆ ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷ ಎ.ಎಂ.ಮಹೇಶ್ ಮಾತನಾಡಿ  ತೆಂಗು ಎಲ್ಲಾ ರೀತಿಯಲ್ಲೂ ಆರೋಗ್ಯದಾಯಕ ಉತ್ಪನ್ನವಾಗಿದೆ ಎಂದು ವೈದ್ಯರು ಶಿಫಾರಸು ಮಾಡುತ್ತಿದ್ದಾರೆ. ಹೀಗಾಗಿ ರೈತರು, ಎಳನೀರು, ಕೊಬ್ಬರಿ, ಎಣ್ಣೆ ಇತ್ಯಾದಿ ಮೌಲ್ಯ ವರ್ಧಿತ ಪದಾರ್ಥಗಳ ತಯಾರಿಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು. ಎಳನೀರು ಇತರೆ ತಂಪು ಪಾನೀಯಗಳ ಜತೆಗೆ ಸ್ಪರ್ಧಿಸಿ ಮಾರುಕಟ್ಟೆಯಲ್ಲಿ ಉಳಿಯಬೇಕಿದೆ. ಹೀಗಾಗಿ ಇದರ ಉಪ ಉತ್ಪನ್ನಗಳ ತಯಾರಿಕೆಗೂ ರೈತರು ಆದ್ಯತೆ ನೀಡಬೇಕು ಎಂದು ಹೇಳಿದರು.

ಈ ವೇಳೆ  ವಿವಿಧ ತೆಂಗಿನ ತಳಿಗಳನ್ನು ಪ್ರದರ್ಶಿಸಲಾಯಿತು.ಕೃಷಿ ಇಲಾಖೆಯ ಅಧಿಕಾರಿಗಳು ತೆಂಗು ಬೆಳೆಗೆ ತಗಲುವ ರೋಗ ಬಾಧೆ ಮತ್ತು  ಪರಿಹಾರ ಕ್ರಮಗಳ  ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

17 minutes ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

2 hours ago

ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ

ಕರ್ನಾಟಕದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ…

2 hours ago

ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು

ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…

3 hours ago

ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ

ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್‌ ಮುಷ್ಕರವನ್ನು ಕೊನೆ ಕ್ಷಣದಲ್ಲಿ…

7 hours ago