ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯು ತೆಂಗಿನ ಮೌಲ್ಯವರ್ಧನೆಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವುಗಳಲ್ಲಿ ಒಂದಾದ ತೆಂಗಿನಕಾಯಿಯ ಗೆರಟೆಯ ಉತ್ಪನ್ನಗಳ ತಯಾರಿಕೆಗಾಗಿ ಅನೇಕ ತರಬೇತಿಗಳನ್ನು ನೀಡಲಾಗಿದ್ದುತರಬೇತಿಯ ಪ್ರಗತಿ ಪರಿಶೀಲನ ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆಯ ಕಾರ್ಪೊರೇಟ್ ಕಚೇರಿಯಲ್ಲಿ ನಬಾರ್ಡ್ ಮಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು.
ಈ ಸಭೆಯಲ್ಲಿ ನಬಾರ್ಡ್ ನ ಎಜಿಎಂ ಸಂಗೀತ ಕರ್ತ, ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್, ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಕುಸುಮಾಧರ್ ಎಸ್ ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಎ, NRLM ಯೋಜನೆಯ ತಾಲೂಕು ಮೇಲ್ವಿಚಾರಕರಾದ ನಳಿನಿ ಮತ್ತು ಕೋಡಿಂಬಾಡಿ ಹಾಗೂ ವಿಟ್ಲ ಪಡ್ನೂರ್ ಗ್ರಾಮದ ತೆಂಗಿನ ಗೆರಟೆ ಕಲಾಕೃತಿ ತಯಾರಿಕೆ ತರಬೇತಿಯಲ್ಲಿ ಭಾಗವಹಿಸಿದ ಸಂಜೀವಿನಿ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.
ಈ ಸಂದರ್ಭ ತೆಂಗಿನ ಗೆರಟೆ ಕಲಾಕೃತಿ ತರಬೇತಿಯ ನಂತರ ಆದ ಬೆಳವಣಿಗೆ, ಮುಂದಿನ ಯೋಜನೆಗಳು, ಮಹಿಳೆಯರು ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಬಗ್ಗೆ ಚರ್ಚಿಸಲಾಯಿತು.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…