ಬೀದರಿನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ, ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರ ಹಾಗೂ ಬೆಂಗಳೂರಿನ ತೆಂಗು ಅಭಿವೃದ್ಧಿ ಮಂಡಳಿಯ ವತಿಯಿಂದ ತೆಂಗಿನಮರ ಹತ್ತುವ ತರಬೇತಿ ಕಾರ್ಯಕ್ರಮ ಇದೇ ಜ.16 ರಿಂದ 21ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವನ್ನು ಜ.16ರಂದು ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಉದ್ಘಾಟನೆ ಇದೇ ಜ.16ರಂದು ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಂಗಳೂರು ನಗರದ ಸಿಟಿ ಟ್ರಾಫಿಕ್ ಪೊಲೀಸ್ ಎಸಿಪಿ ಗೀತಾ ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸುವರು. ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಟಿ.ಜೆ ರಮೇಶ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಬೆಂಗಳೂರಿನ ತೆಂಗು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಇ. ಅರವಾಳಿ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಎಚ್.ಆರ್. ನಾಯಕ್ ನಾಯಕ್ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಮಂಗಳೂರಿನ ಅನುಷ್ ಹಾಗೂ ಬಂಟ್ವಾಳದ ದಿನೇಶ್ ಮುಖ್ಯ ತರಬೇತಿದಾರರಾಗಿ ಭಾಗವಹಿಸಲಿದ್ದಾರೆ.
ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ…
ಕೂಲಿ ಕಾರ್ಮಿಕರು ಜೀವನ ನಿರ್ವಹಣೆ ಮಾಡಲು ದೂರದ ನಗರಗಳಿಗೆ ವಲಸೆ ಹೋಗದೆ ಉದ್ಯೋಗ…
ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…
ಭಾರತದಲ್ಲಿ 1.4 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಸುಮಾರು…
ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ 2ರಿಂದ…
ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.