ಕೊಡಗು ಜಿಲ್ಲೆಯಲ್ಲಿ ಕೃಷಿ, ಕಾಫಿ ಮುಖ್ಯ ಬೆಳೆಯಾಗಿದ್ದು, ಕಾಫಿ ಜತೆಗೆ ಕೃಷಿ ಮತ್ತು ತೋಟಗಾರಿಕೆಯ ಸಮಗ್ರ ಅಭಿವೃದ್ಧಿಗೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ವಿವಿಧ ಇಲಾಖೆಗಳ ಸಹಕಾರದಲ್ಲಿ ಕಾಫಿ ಹಾಗೂ ಕೃಷಿ ಸಂಬಂಧಿತ ಮಾಹಿತಿಯುಳ್ಳ ಎರಡು ದಿನಗಳ ವಸ್ತು ಪ್ರದರ್ಶನ ಮಳಿಗೆ ವೀಕ್ಷಣೆ ಹಾಗೂ ಮೊದಲ ವರ್ಷದ ಕಾಫಿ ದಸರಾಗೆ ಭಾನುವಾರ ಚಾಲನೆ ನೀಡಿ ಸಚಿವರು ಮಾತನಾಡಿದರು. ಕಾಫಿ ಬೆಳೆಗಾರರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಗಮನ ಹರಿಸಲಾಗುವುದು, ಪ್ರಸಕ್ತ ವರ್ಷ ಭತ್ತ ಬೆಳೆಗೆ ಸಹಾಯಧನ ಕಲ್ಪಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಎನ್.ಚಲುವರಾಯಸ್ವಾಮಿ ಅವರು ವಿವರಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel