Advertisement
MIRROR FOCUS

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

Share

ವಿಶ್ವದ ಅತಿದೊಡ್ಡ ಕಾಫಿ ಉತ್ಪಾದಕ ರಾಷ್ಟ್ರವಾದ ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಕಾಫಿ ಕೊಯ್ಲು ನಿರೀಕ್ಷಿತ ಪ್ರಮಾಣದಲ್ಲಿ ನಡೆಯದಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ ಏರಿಕೆಗೆ ಕಾರಣವಾಗಿದೆ. ಇದರ ಪರಿಣಾಮವಾಗಿ ಕರ್ನಾಟಕದಲ್ಲೂ ಕಾಫಿ ಬೆಲೆ ಉತ್ತಮ ಏರಿಕೆ ಕಂಡಿದೆ.

ಸೋಮವಾರದ ವಹಿವಾಟಿನಲ್ಲಿ ಅರೇಬಿಕಾ ಕಾಫಿ ಬೆಲೆ ಟನ್‌ಗೆ ಸುಮಾರು 3,700 ಡಾಲರ್‌ನಿಂದ 4,000 ಡಾಲರ್‌ಗೆ ಏರಿಕೆಯಾಗಿದೆ. ಇದೇ ವೇಳೆ ರೋಬಸ್ಟಾ ಕಾಫಿ ಬೆಲೆಯಲ್ಲಿಯೂ ಗಮನಾರ್ಹ ಏರಿಕೆ ದಾಖಲಾಗಿದೆ.

ನ್ಯೂಯಾರ್ಕ್‌ ಮಾರುಕಟ್ಟೆಯಲ್ಲಿ ಅರೇಬಿಕಾ ಕಾಫಿ ಫ್ಯೂಚರ್ಸ್‌ ಸುಮಾರು 48 ಸೆಂಟ್ಸ್‌ ಏರಿಕೆಯಾಗಿದ್ದು, ಒಂದು ದಿನದಲ್ಲೇ ಸುಮಾರು ಶೇ.16ರಷ್ಟು ಬೆಲೆ ಹೆಚ್ಚಳ ಕಂಡಿದೆ. ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗುತ್ತಿರುವುದು ಹಾಗೂ ಜಾಗತಿಕ ಪೂರೈಕೆಯ ಬಗ್ಗೆ ಆತಂಕ ಹೆಚ್ಚುತ್ತಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಗೆ ಪ್ರಮುಖ ಕಾರಣ ಬ್ರೆಜಿಲ್‌ನಲ್ಲಿನ ಅಸಹಜ ಮಳೆ. ವಿಶ್ವದ ಅತಿದೊಡ್ಡ ಕಾಫಿ ಉತ್ಪಾದಕ ಮತ್ತು ರಫ್ತುದಾರ ರಾಷ್ಟ್ರವಾದ ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಕೊಯ್ಲು ಸ್ಥಗಿತಗೊಂಡಿದ್ದು, ಕೊಯ್ಲು ಮಾಡಿದ ಕಾಫಿ ಒಣಗಿಸಲು ಸಾಧ್ಯವಾಗುತ್ತಿಲ್ಲ. ಹೆಚ್ಚಿದ ತೇವಾಂಶದಿಂದ ಶಿಲೀಂಧ್ರ ಮತ್ತು ಬ್ಯಾಕ್ಟೀರಿಯಾ ರೋಗಗಳ ಅಪಾಯವೂ ಹೆಚ್ಚಿರುವುದಾಗಿ ರೈತರು ಹಾಗೂ ಕೃಷಿ ತಜ್ಞರು ಎಚ್ಚರಿಸಿದ್ದಾರೆ. ಇದರ ಪರಿಣಾಮ ಜಾಗತಿಕ ಕಾಫಿ ಪೂರೈಕೆಯ ಬಗ್ಗೆ ಆತಂಕ ಹೆಚ್ಚಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಗೆ ಕಾರಣವಾಗಿದೆ.  ಮುಂಬರುವ ದಿನಗಳಲ್ಲಿ ಬೆಳೆ ಇನ್ನಷ್ಟು ಕೊರತೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಖರೀದಿದಾರರು ಮುಂಗಡ ವಹಿವಾಟಿನಲ್ಲಿ ಆಸಕ್ತಿ ತೋರಿಸುತ್ತಿರುವುದು ಕೂಡ ಬೆಲೆ ಏರಿಕೆಗೆ ಕಾರಣವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ದೇಶೀಯ ಮಾರುಕಟ್ಟೆಯಲ್ಲಿಯೂ ಬೆಲೆ ಏರಿಕೆಯ ಪರಿಣಾಮ ಗೋಚರಿಸಿದೆ. ಬ್ರೆಜಿಲ್‌ನ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿಯೂ ಕಾಫಿ ಬೆಲೆ ಉತ್ತಮ ಮಟ್ಟದಲ್ಲೇ ಮುಂದುವರಿಯುವ ಸಾಧ್ಯತೆ ಇದೆ ಎಂದು ವ್ಯಾಪಾರ ವಲಯ ಅಂದಾಜಿಸಿದೆ.  ಸದ್ಯ ಚಿಕ್ಕಮಗಳೂರು ಪ್ರದೇಶದಲ್ಲಿ ಕಾಫಿ ಬೆಲೆ ಕೆ.ಜಿಗೆ ಸುಮಾರು ₹45ರಷ್ಟು ಹೆಚ್ಚಳವಾಗಿದೆ. ಪ್ರಸ್ತುತ ರೋಬಸ್ಟಾ ಕಾಫಿ ಕೆ.ಜಿ.ಗೆ ₹350ರಿಂದ ₹395 ಹಾಗೂ ಅರೇಬಿಕಾ ಕಾಫಿ ಕೆ.ಜಿ.ಗೆ ₹575ರವರೆಗೆ ವಹಿವಾಟಾಗುತ್ತಿದೆ.

Coffee prices have surged in Karnataka following delays in Brazil’s coffee harvest due to continuous rainfall. Global supply concerns have pushed up Arabica and Robusta prices, benefiting domestic coffee growers.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ

‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…

8 hours ago

ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?

ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್‌ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…

10 hours ago

ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!

ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…

17 hours ago

ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!

ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…

20 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್

ಹಾಲಿನ ದರವನ್ನು ₹12 ಹೆಚ್ಚಿಸುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿದ್ದಾರೆ.…

22 hours ago

ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯದ ಸಮಾರೋಪದಲ್ಲಿ ದೇಶಿ ಗೋವಿನ ಹಾಲು, ತುಪ್ಪ ಹಾಗೂ…

1 day ago